BELAGAVI

ಪೋಕ್ಸೋ ಪ್ರಕರಣದಲ್ಲಿ ಲೋಪವಾಗಿದ್ದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ

Share

ಪೋಕ್ಸೋ ಆರೋಪಿಯನ್ನು ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಈ ಬಗ್ಗೆ ಪೊಲೀಸ್ ಕಮಿಷನರ್ ಜೊತೆ ಚರ್ಚಿಸಿ, ಲೋಪವಾಗಿದ್ದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಇಂದು ಬೆಳಗಾವಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಸಂಸದ ಧೈರ್ಯಶೀಲ್ ಮಾನೆ ಅವರು ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಲೋಕಸಭಾ ಸ್ಪೀಕರ್‌ಗೆ ನೀಡಿರುವ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, “ನಮ್ಮ ಪ್ರಕಾರ ಡಿಸಿ ಯಾವುದೇ ತಪ್ಪು ಮಾಡಿಲ್ಲ. ನೋಟಿಸ್ ಬರಲಿ, ಕಾನೂನುಬದ್ಧವಾಗಿ ಎದುರಿಸುತ್ತೇವೆ” ಎಂದು ಸಮರ್ಥಿಸಿಕೊಂಡರು.

ಜಾಮೀನಿನ ಮೇಲೆ ಪೋಕ್ಸೋ ಆರೋಪಿಯನ್ನು ಬಿಡುಗಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಈ ಬಗ್ಗೆ ಪೊಲೀಸ್ ಕಮಿಷನರ್ ಜೊತೆ ಚರ್ಚಿಸಿ, ಲೋಪವಾಗಿದ್ದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದರು.
ಬೆಳಗಾವಿ ನಗರದ ಸಂಚಾರ ದಟ್ಟಣೆ ನಿವಾರಣೆಗೆ 275 ಕೋಟಿ ರೂ. ವೆಚ್ಚದ ಫ್ಲೈ ಓವರ್ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ. ಯಾವುದೇ ಭೂಸ್ವಾಧೀನ ಪ್ರಕ್ರಿಯೆ ಇಲ್ಲದೆ, ಎರಡು ಹಂತಗಳಲ್ಲಿ ಈ ಮಾದರಿ ಫ್ಲೈ ಓವರ್ ನಿರ್ಮಾಣವಾಗಲಿದ್ದು, ಫೆಬ್ರವರಿ ಅಂತ್ಯಕ್ಕೆ ಕೆಲಸ ಶುರುವಾಗಲಿದೆ ಎಂದರು .

ಇನ್ನು ಬೆಳಗಾವಿ ಜಿಲ್ಲಾ ವಿಭಜನೆ ಕುರಿತು ಶಾಸಕರಲ್ಲಿ ಭಿನ್ನಾಭಿಪ್ರಾಯಗಳಿದ್ದು, ಈ ಬಗ್ಗೆ ಬೆಂಗಳೂರಿನಲ್ಲಿ ಶೀಘ್ರವೇ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

Tags:

error: Content is protected !!