ತಾಲ್ಲೂಕಿನ ಅಂಕಲಿ ಗ್ರಾಮದ ಕೆಎಲ್‍ಇ ಸಂಸ್ಥೆಯ ಶ್ರೀಮತಿ ಶಾರದಾದೇವಿ ಕೋರೆ ಪಿಯು ಕಾಲೇಜಿನ ವಿದ್ಯಾರ್ಥಿನಿ ಅರ್ಪಿತಾ ಎಸ್ ಎಂಟೆತ್ತಿನವರ 2025-26ನೇ ಸಾಲಿನ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಬೆಳಗಾವಿ ಜಿಲ್ಲಾ ಪಂಚಾಯಿತಿ, ಮುಖ್ಯ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸಹಯೋಗದಲ್ಲಿ ಆಯೋಜಿಸಿದ್ದ ಬೆಳಗಾವಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ “How EVM and VVPAT Increases voters of confidence on election commission of India
“ವಿಷಯ ಕುರಿತು ಇಂಗ್ಲೀಷ್ ಮಾಧ್ಯಮದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡ ವಿದ್ಯಾರ್ಥಿನಿ ಸಾಧನೆಯನ್ನು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಅಂಕಲಿ ಪಿಯು ಕಾಲೇಜಿನ ಪ್ರಾಚಾರ್ಯ ಪಿ ಎನ್ ತಳವಾರ ಸೇರಿದಂತೆ ಹಲವರು ಅಭಿನಂದಿಸಿದ್ದಾರೆ.
