ಅಥಣಿಯಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು. ಗುಂಪು ಗುಂಪಾಗಿ ಸಂಚರಿಸುವ ನಾಯಿಗಳಿಂದ ಸಾರ್ವಜನಿಕರು ಹೈರಾಣಾಗಿದ್ದಾರೆ. ಮಕ್ಕಳು, ವೃದ್ಧರು ರಸ್ತೆಗೆ ಇಳಿಯಲು ಭಯಪಡುವಂತಾಗಿದ್ದರೂ ಪುರಸಭೆ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕುಳಿತಿದ್ದಾರೆ.

ಅಥಣಿ ಪಟ್ಟಣದ ಗಲ್ಲಿ ಗಲ್ಲಿಯಲ್ಲೂ ಈಗ ನಾಯಿಗಳದ್ದೇ ಅಬ್ಬರ. ಒಂದೊಂದು ವಾರ್ಡ್‌ನಲ್ಲಿ 12 ರಿಂದ 15 ನಾಯಿಗಳು ಗುಂಪು ಕಟ್ಟಿಕೊಂಡು ಓಡಾಡುತ್ತಿದ್ದು, ಜನರ ಮೇಲೆ ದಾಳಿಗೆ ಮುಂದಾಗುತ್ತಿವೆ. ಈ ನಾಯಿಗಳು ಅತಿ ಹೆಚ್ಚು ಆಕ್ರಮಣಕಾರಿಯಾಗಿದ್ದು, ಸಾರ್ವಜನಿಕರ ನೆಮ್ಮದಿ ಕೆಡಿಸಿವೆ. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತು ನಾಯಿಗಳನ್ನು ಸ್ಥಳಾಂತರಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಅಥಣಿ ಸಾರ್ವಜನಿಕರು ಎಚ್ಚರಿಸಿದ್ದಾರೆ.
