Bagalkote

ಬಾಗಲಕೋಟೆ ದಿವ್ಯಜ್ಯೋತಿ ವಿಶೇಷ ಶಾಲೆಯಲ್ಲಿ ನಡೆದ ಹಲ್ಲೆ ಪ್ರಕರಣ…. ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು…..

Share

ಅಸಹಾಯಕ ವಿಶೇಷ ಚೇತನ ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳಬೇಕಾದ ಶಿಕ್ಷಕರೇ ಮಕ್ಕಳ ಮೇಲೆ ಅಮಾನವೀಯವಾಗಿ ದೌರ್ಜನ್ಯ ಎಸಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗವು ಈಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.

ಬಾಗಲಕೋಟೆ ನವನಗರದಲ್ಲಿರುವ ‘ದಿವ್ಯಜ್ಯೋತಿ ಬುದ್ಧಿಮಾಂದ್ಯ ವಿಶೇಷ ವಸತಿ ಶಾಲೆ’ ಯಲ್ಲಿ ಈ ಕೃತ್ಯ ನಡೆದಿದೆ. ಶಾಲೆಯ ಶಿಕ್ಷಕರು ವಿಶೇಷ ಚೇತನ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಈಗ ಕಾನೂನು ಕ್ರಮಗಳು ಬಿಗಿಗೊಂಡಿವೆ.
ಘಟನೆಯ ಕುರಿತು ಮಾಹಿತಿ ನೀಡಿರುವ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ ಕೋಸಂಬಿ ಅವರು, ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ ಎಂದು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆಯೋಗವು ಈಗಾಗಲೇ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಅಧಿಕೃತ ಪತ್ರ ಬರೆದಿದೆ. ಈ ಥರ ಅಮಾನುಷ ಹಲ್ಲೆ ನಡೆದಿರುವುದು ಅಪರಾಧ ಇದೊಂದು ರಾಜ್ಯದಲ್ಲಿ ಸಮಾಜ ತಲೆ ತಗ್ಗಿಸುವಂತಹ ಘಟನೆ ನಡೆದಿದೆ.ಇದಕ್ಕೆ ಸೂಕ್ತ ಕ್ರಮಕ್ಕೆ ಆಯೋಗ ಸರ್ಕಾರಕ್ಕೆ ಸಿಪಾರಸ್ಸು ಮಾಡಲಾಗುತ್ತೆ ಎಂದು ಹೇಳಿದರು..

 

ಜಿಲ್ಲಾಡಳಿತಕ್ಕೆ ಪತ್ರ ತಲುಪಿದ ತಕ್ಷಣ, ಈ ಪ್ರಕರಣದಲ್ಲಿ ಇದುವರೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ವರದಿ ನೀಡಬೇಕು” ಎಂದು ಆಯೋಗವು ಸೂಚಿಸಿದೆ. ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಶಿಕ್ಷಕರ ವಿರುದ್ಧ ಕೈಗೊಂಡ ಕಾನೂನು ಕ್ರಮಗಳು ಮತ್ತು ಮಕ್ಕಳ ಸುರಕ್ಷತೆಗೆ ಕೈಗೊಂಡ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡುವಂತೆ ತಾಕೀತು ಮಾಡಲಾಗಿದೆ.

Tags:

error: Content is protected !!