ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ರಬಕವಿ ನಗರದ ಸಮೀಪ ಬೆಳಗಾವಿ ಜಿಲ್ಲೆಯ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮದ ನಿವಾಸಿಯಾದ ಮಹೇಶ್ ಮಾದರ (24) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಯುವಕನ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ತೇರದಾಳ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಯುವಕನು ರಬಕವಿ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಇದರ ಹಿಂದೆ ಬೇರೆ ಏನಾದರೂ ಕಾರಣಗಳಿವೆಯೇ ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

