Bagalkot

ನಡುರಸ್ತೆಯಲ್ಲಿ ಗೂಳಿಗಳ ಕಾಳಗ…ಭಯಭೀತಗೊಂಡ ಜನ

Share

ಜಮಖಂಡಿ ನಗರದಲ್ಲಿ ದಿನೇ ದಿನೇ ಬೀದಿ ದನಗಳ ಹಾವಳಿ ಮಿತಿಮೀರುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಓಡಾಡಲು ಭಯಪಡುವಂತಾಗಿದೆ. ಅದರಲ್ಲೂ ವಿಶೇಷವಾಗಿ ನಗರದ ಮಾರುಕಟ್ಟೆ ಪ್ರದೇಶದಲ್ಲಿ ಆಕಳು ಮತ್ತು ಹೋರಿಗಳ ಕಾಳಗ ಸರ್ವೇ ಸಾಮಾನ್ಯವಾಗಿದ್ದು, ವ್ಯಾಪಾರಸ್ಥರು ಹಾಗೂ ಗ್ರಾಹಕರು ಪ್ರಾಣಭಯದಲ್ಲಿ ಕಾಲ ಕಳೆಯುವಂತಾಗಿದೆ.
ಗೂಳಿಗಳ ಕದಾಟದಿಂದಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಹಲವು ಬಾರಿ ಗಾಯಗೊಂಡ ಘಟನೆಗಳು ಸಂಭವಿಸಿದ್ದು, ಮಾರುಕಟ್ಟೆಗೆ ಬರಲು ಜನರು ಬೆಚ್ಚಿ ಬೀಳುತ್ತಿದ್ದಾರೆ. ಈ ಕುರಿತು ನಗರಸಭೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳು ಹಲವು ಬಾರಿ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಕ್ಯಾರೇ ಎನ್ನದ ಧೋರಣೆ ಅನುಸರಿಸುತ್ತಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜಮಖಂಡಿ ನಗರದ ಜನತೆ ನಗರಸಭೆ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದು, ಇನ್ನಾದರೂ ಸಂಬಂಧಪಟ್ಟ ಇಲಾಖೆ ಎಚ್ಚೆತ್ತು ಬೀದಿ ದನಗಳ ಹಾವಳಿಗೆ ಮುಕ್ತಿ ಹಾಡಬೇಕೆಂದು ಒತ್ತಾಯಿಸಿದ್ದಾರೆ.

Tags:

error: Content is protected !!