Vijaypura

105 ದಿನಗಳ ಹೋರಾಟಕ್ಕೆ ಮತ್ತೊಮ್ಮೆ ಆನೆ ಬಲ; ಸಚಿವ ಎಂ.ಬಿ.ಪಾಟೀಲರಿಂದ ಸ್ಪಷ್ಟನೆ ಜೊತೆಗೆ ಭರವಸೆ

Share

ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಕಳೆದ 105 ದಿನಗಳಿಂದ ಅಹೋರಾತ್ರಿ ಧರಣಿ ನಡೆಯುತ್ತಿದೆ. ಪ್ರಗತಿಪರ ಸಂಘಟನೆಗಳು ಹಾಗೂ ವಿದ್ಯಾರ್ಥಿ ಗಳು ನಡೆಸುತ್ತಿರುವ ಹೋರಾಟ ತೀವ್ರತೆ ಪಡೆದು ಹೋರಾಟಗಾರರು ಜಿಲ್ಲೆಯ ಜನಪ್ರತಿನಿಧಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಅದರಲ್ಲೂ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧವೂ ವಾಕ್ಪ್ರಹಾರ ನಡೆಸುತ್ತಿದ್ದಾರೆ. ಇತ್ತ ಬಿಜೆಪಿ ಕೂಡ ಪ್ರತಿಭಟನೆ ಗೆ ಸಾಥ್ ನೀಡಿದೆ. ಹೀಗಾಗಿ ಸಚಿವ ಎಂ.ಬಿ.ಪಾಟೀಲ ಪಿಪಿಪಿ ಮಾದರಿ ಕೈ ಬಿಟ್ಟು ಸರ್ಕಾರಿ ಸ್ವಾಮ್ಯದ ಕಾಲೇಜು ಸ್ಥಾಪಿಸಲು ತಯಾರು ಎಂದಿದ್ದಾರೆ. ಸಿಎಂ ಬಳಿ ಮತ್ತೊಮ್ಮೆ ನಿಯೋಗ ದ ಕುರಿತು ಮಾತನಾಡಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್…

ವಿಜಯಪುರ ಜಿಲ್ಲೆಯಲ್ಲಿ ಪಿಪಿಪಿ ಅಂದರೆ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಘೋಷಣೆ ಮಾಡಿದೆ. ಘೋಷಣೆ ಬೆನ್ನಲ್ಲೇ ಪ್ರಗತಿಪರ ಒಕ್ಕೂಟ, ವಿದ್ಯಾರ್ಥಿಗಳು ಕಳೆದ ಮೂರು ತಿಂಗಳಿನಿಂದ ಧರಣಿ ನಡೆಸಿ ಪಿಪಿಪಿ ಮಾದರಿ ಕೈ ಬಿಟ್ಟು ಸಂಪೂರ್ಣ ಸರ್ಕಾರಿ ಸ್ವಾಮ್ಯದ ಕಾಲೇಜು ಸ್ಥಾಪಿಸಲು ಒತ್ತಾಯಿಸುತ್ತಿದ್ದಾರೆ. ವಿವಿಧ ತರಹರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಬಿಸಿ‌ ಮುಟ್ಟಿಸುತ್ತಲೇ ಇದ್ದಾರೆ. ಇದೀಗ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ಬಿಜೆಪಿ ಬೆಂಬಲ ಸೂಚಿಸಿದೆ. ಇದೀಗ ಹೋರಾಟಗಾರರು ಶಾಸಕರು, ಸಚಿವರ ವಿರುದ್ದ ವಾಕ್ಪ್ರಹಾರ ನಡೆಸುತ್ತಿದ್ದಾರೆ. ಇನ್ನೂ ವಿಜಯಪುರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಹೊಂದಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಮ್ಮ ಕಾಲೇಜಿಗೆ ತೊಂದರೆ ಯಾಗುತ್ತದೆ ಎನ್ನುವ ಕಾರಣದಿಂದಾಗಿ ಪಿಪಿಪಿ ಮಾದರಿ ತರಲು ಹೊರಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ಆದರೆ ಸಚಿವ ಎಂ.ಬಿ.ಪಾಟೀಲ ಹೋರಾಟಗಾರರ ನಿಯೋಗವನ್ನು ಸಿಎಂ ಸಿದ್ದರಾಮಯ್ಯ ಬಳಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಪ್ರತಿಭಟನೆ ಮಾಡುತ್ತಿದ್ದ ಹೋರಾಟಗಾರರನ್ನು ಬೆಂಗಳೂರಿಗೆ ಕರೆಸಿ ಮುಖ್ಯಮಂತ್ರಿಗಳ ಮುಂದೆ ಅವಮಾನಿಸಿ ಕಳುಹಿಸಿದ್ದಾರೆ. ತಮ್ಮ ವೈದ್ಯಕೀಯ ಕಾಲೇಜಿಗೆ ಹಿನ್ನಡೆಯಾಗುತ್ತದೆ ಎಂಬ ಕಾರಣಕ್ಕೆ ಸಚಿವರು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಇನ್ನೂ ಇದಕ್ಕೆ ಸ್ಪಷ್ಟನೆ ನೀಡಿರುವ ಸಚಿವ ಎಂ.ಬಿ.ಪಾಟೀಲ
ಸಿಎಂ ಬಳಿಗೆ ಈ ಹಿಂದೆ ನಿಯೋಗ ಕರೆಯ್ದಾಗ ಹೋರಾಟಗಾರರಿಗೆ ಎಲ್ಲಿಯೂ ಅವಮಾನ ಆಗಿಲ್ಲ. ಸಿಎಂ ಅವರು ಅಂದು ಕಾರ್ಯಕ್ರಮಗಳ ಒತ್ತಡದಲ್ಲಿ ಇದ್ದರು. ಅವರ ಪತ್ನಿ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಇದ್ದರು. ಹೀಗಾಗಿ ನಿಯೋಗದೊಂದಿಗೆ ಚರ್ಚಿಸಲು ಹೆಚ್ಚು ಸಮಯ ಇರಲಿಲ್ಲ’ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ‘ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಮುಂದಾಳತ್ವವವನ್ನು ನಾನೇ ವಹಿಸಿಕೊಳ್ಳುತ್ತೇನೆ. ಜಿಲ್ಲೆಗೆ ಕಾಲೇಜನ್ನು ಮಂಜೂರು ಮಾಡಿಸಿಕೊಂಡು ಬರಲು ಎಲ್ಲ ಪ್ರಯತ್ನ ಮಾಡುತ್ತೇನೆ, ಈ ಸಮಸ್ಯೆಯನ್ನು ನಾನೇ ಬಗೆಹರಿಸುತ್ತೇನೆ’ ಎಂದಿದ್ದಾರೆ. ಅಲ್ಲದೇ ನಾನು ಕೂಡ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಪರವಾಗಿದ್ದೇನೆ, ಈ ವಾರದಲ್ಲೇ ಮತ್ತೊಮ್ಮೆ ಮುಖ್ಯಮಂತ್ರಿಯವರ ಬಳಿಗೆ ಹೋರಾಟಗಾರರ ನಿಯೋಗ ಕರೆದೊಯ್ದು, ಅವರನ್ನು ಒಪ್ಪಿಸುತ್ತೇನೆ’ ಎಂದಿದ್ದಾರೆ. ‘ಉದ್ದೇಶಿತ ಪಿಪಿಪಿ ಮಾದರಿ ಕೈಬಿಟ್ಟು ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಅಗತ್ಯ ಕ್ರಮಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.’ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು ಎಂಬ ಜಿಲ್ಲೆಯ ಜನತೆಯ ಬೇಡಿಕೆ, ಹೋರಾಟದ ಕುರಿತು ಈಗಾಗಲೇ ಸಚಿವ ಸಂಪುಟ ಸಭೆ, ವಿಧಾನಸಭಾ ಅಧಿವೇಶನದಲ್ಲಿ ಚರ್ಚೆಯಾಗಿದೆ. ಮುಖ್ಯಮಂತ್ರಿಯವನ್ನು ಒಮ್ಮೆ ಭೇಟಿಯಾಗಿ ಚರ್ಚಿಸಲಾಗಿದೆ. ಮುಖ್ಯಮಂತ್ರಿ ಅವರೂ ಸಹ ಪಿಪಿಪಿ ಕೈಬಿಡುವುದಾಗಿ ಹೇಳಿದ್ದಾರೆ.

ಒಟ್ಟಾರೆ ಸಚಿವರ ವಿರುದ್ಧದ ಆರೋಪಕ್ಕೆ ಸಚಿವರು ಸ್ಪಷ್ಟನೆ ನೀಡಿದ್ದು ಇನ್ನೊಂದು ಬಾರಿ ಹೋರಾಟಗಾರರನ್ನು ಸಿಎಂ ಬಳಿಗೆ ಕರೆದೊಯ್ಯುವ ಭರವಸೆ ನೀಡಿದ್ದಾರೆ. ಸರ್ಕಾರಿ ಕಾಲೇಜು ಸ್ಥಾಪನೆಗೆ ಬದ್ಧ ಎಂದಿರೋದು ಜಿಲ್ಲೆಯ ಜನತೆಯಲ್ಲಿ ಆಶಾಕಿರಣ ಮೂಡಿಸಿದೆ.

Tags:

error: Content is protected !!