ಅವರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ಹಾಗೂ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ಆರಂಭಗೊಂಡ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಿ ಮಾತನಾಡಿದರು.


ಅಥಣಿ ಪುರಸಭೆಯಿಂದ ನಗರಸಭೆಗೆ ಬಡ್ತಿ ಪಡೆದಿದ್ದು ಸಂತಸದ ಸಂಗತಿ ಈ ಕಾರ್ಯಕ್ಕೆ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳು ಎಂದರು, ಅನಂತರ ಅಥಣಿ ಮತಕ್ಷೇತ್ರದ ಪ್ರವಾಹ ಪೀಡಿತರಿಗೆ ಪುನರ್ ವಸತಿ ಕಲ್ಪಿಸುವಲ್ಲಿ ಕೆಲವು ಅಡಚಣೆಗಳು ಉಂಡಾಗಿದ್ದು ಅವುಗಳನ್ನು ಶೀಘ್ರವೇ ಬಗೆಹರಿಸಲಾಗುವುದು ಹಾಗೂ ಸವದಿ ಅವರು ಮಲ್ಲಿಗೆ ಹೂವು ಇದ್ದ ಹಾಗೆ ಅವರನ್ನು ಯಾರೂ ಕುಗ್ಗಿಸಲು ಸಾಧ್ಯವಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
