Chikkodi

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ವಿವಿಧ ಮಠಾಧೀಶರ ನೇತೃತ್ವದಲ್ಲಿ ಮಹತ್ವದ ಸಭೆ

Share

ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆ ಎಂದು ಘೋಷಿಸುವಂತೆ ಆಗ್ರಹಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಮತ್ತು 25 ಮಂದಿ ಸ್ವಾಮೀಜಿಗಳು ಸಭೆಯಲ್ಲಿ ಭಾಗವಹಿಸಿ ಪ್ರತ್ಯೇಕ ಜಿಲ್ಲೆ ರಚನೆಗಾಗಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿ ಸಭೆಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಿಕ್ಕೋಡಿ ಪ್ರತ್ಯೇಕ ಜಿಲ್ಲಾ ರಚನೆ ಜನತೆಗೆ ವರ್ಷಗಳಿಂದಲೂ ಇರುವ ನಿರೀಕ್ಷೆ. ಸರ್ಕಾರ ಇನ್ನಷ್ಟು ವಿಳಂಬ ಮಾಡದೆ ತಕ್ಷಣ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಎಸ್‌.ವೈ. ಹಂಜಿ ಮಾತನಾಡಿ, ಅಖಂಡ ಕರ್ನಾಟಕ ನಿರ್ಮಾಣದಲ್ಲಿ ಉತ್ತರ ಕರ್ನಾಟಕದ ಅರಸರ ಕೊಡುಗೆ ಅಪಾರ. ಆದರೆ ಇಂದಿನ ಅಭಿವೃದ್ಧಿ ಹಂಚಿಕೆಯಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಚಿಕ್ಕೋಡಿ ಜಿಲ್ಲೆ ರಚನೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಸಂಸದರು ಹಾಗೂ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಎಲ್ಲರೂ ಸಹಕಾರಿಸುವ ಮನೋಭಾವ ವ್ಯಕ್ತಪಡಿಸಿದ್ದಾರೆ,” ಎಂದು ಹೇಳಿದರು.

ಸಭೆಯಲ್ಲಿ ಚಿಕ್ಕೋಡಿಯ ಸಂಪಾದನ ಸ್ವಾಮೀಜಿ,ಜೋಡಕುರಳಿಯ ಚಿದ್ಭಾನಂದ ಸ್ವಾಮೀಜಿ,ಬೆಲ್ಲದ ಬಾಗೇವಾಡಿ ಶಿವಾನಂದ ಸ್ವಾಮೀಜಿ, ಬೆಂಡವಾಡ ಗುರುಸಿದ್ದ ಸ್ವಾಮೀಜಿ, ಸಿದ್ದೇಶ್ವರ ಸ್ವಾಮೀಜಿ,ಶರಣಬಸವ ದೇವರು, ಗುರುದೇವ ದೇವರು,ಮಲ್ಲಿಕಾರ್ಜುನ ಸ್ವಾಮೀಜಿ, ಶಿವಾನಂದ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ರೇವಣಸಿದ್ದೇಶ್ವರ ಸ್ವಾಮೀಜಿ,ಹೋರಾಟ ಸಮಿತಿ ಮುಖಂಡರಾದ ರುದ್ರಪ್ಪ ಸಂಗಪ್ಪಗೋಳ,ಸುರೇಶ ಬ್ಯಾಕೂಡೆ, ನಾಗೇಶ ಮಾಳಿ,ರೇವಪ್ಪ ತಳವಾರ,ರಮೇಶ ಬಸ್ತವಾಡೆ,ಅಜೀತ ಸಂಗೊಳ್ಳೆ,ಸಂಸದೆ ಪ್ರಿಯಾಂಕ ಜಾರಕಿಹೊಳಿ ಆಪ್ತ ಸಹಾಯಕ ರಾಮಕೃಷ್ಣ ಪಾನಬುಡೆ ಸೇರಿದಂತೆ ಮುಂತಾದವರು ಇದ್ದರು.

Tags:

error: Content is protected !!