hubbali

ಹುಬ್ಬಳ್ಳಿಯಲ್ಲಿ ಚಿರತೆ ಓಡಾಟ ದೃಶ್ಯ ಮೊಬೈಲ್ ನಲ್ಲಿ ದೃಶ್ಯ ಸೆರೆ : ಜನರಲ್ಲಿ ಆತಂಕ

Share

ಹುಬ್ಬಳ್ಳಿಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವುದು ನಗರದ ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಈ ಚಿರತೆ ನಗರದ ಗಾಮನಗಟ್ಟಿ ಪ್ರದೇಶದಿಂದ ವಿಮಾನ ನಿಲ್ದಾಣಕ್ಕೆ ಸಾಗುವ ರಸ್ತೆಯ ಮಾರ್ಗದಲ್ಲಿ ಮೊದಲು ಕಾಣಿಸಿಕೊಂಡಿದ್ದು, ಸ್ಥಳೀಯರ ಮೊಬೈಲ್ ಫೋನ್‌ಗಳಲ್ಲಿ ಇದರ ಓಡಾಟದ ದೃಶ್ಯ ಸೆರೆಯಾಗಿದೆ. ಇದೇ ಚಿರತೆ ಗೋಕುಲ್ ರೋಡ್‌ನ ರೇಣುಕಾ ನಗರ ಪ್ರದೇಶದಲ್ಲೂ ಕಾಣಿಸಿಕೊಂಡಿರುವುದು ದೃಢಪಟ್ಟಿದೆ.

ಅರಣ್ಯ ಇಲಾಖೆಯಿಂದ ತೀವ್ರ ಶೋಧ ಕಾರ್ಯ
ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಕಳೆದ ನಾಲ್ಮದು ದಿನಗಳಿಂದಲೇ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ವ್ಯಾಪಕ ಶೋಧ ಕಾರ್ಯ ನಡೆಸುತ್ತಿದ್ದು, ಕಾರ್ಯಾಚರಣೆ ತೀವ್ರಗೊಂಡಿದೆ.

Tags:

error: Content is protected !!