Dharwad

ಧಾರವಾಡದಲ್ಲಿ ಬೀದಿಗೆ ಇಳಿದ ಮೆಕ್ಕೆ ಜೋಳ ಬೆಳೆದ ರೈತರು ..

Share

ಸರ್ಕಾರಿ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯಡಿ ಗೋವಿನ ಜೋಳ ಖರೀದಿ ಮಾಡಬೇಕು ಎಂದು ರೈತರು ಆಗ್ರಹಿಸುತ್ತಲೇ ಇದ್ದಾರೆ. ಆದರೆ, ಸರ್ಕಾರ ಖರೀದಿ ಕೇಂದ್ರ ತೆರೆಯದೇ ಕೆಎಂಎಫ್ ಹಾಗೂ ಸಕ್ಕರೆ ಕಾರ್ಖಾನೆಗಳ ಮೂಲಕ ಗೋವಿನ ಜೋಳ ಖರೀದಿ ಮಾಡುತ್ತಿದೆ.

ಕೆಎಂಎಫ್ ಹಾಗೂ ಸಕ್ಕರೆ ಕಾರ್ಖಾನೆಗಳಲ್ಲಿ ಕಡಿಮೆ ಗೋವಿನ ಜೋಳ ಖರೀದಿ ಮಾಡುತ್ತಿದ್ದು, ಇದು ರೈತರಿಗೆ ಅನ್ಯಾಯ ಮಾಡಿದಂತಾಗುತ್ತಿದೆ. ಕೂಡಲೇ ಸರ್ಕಾರವೇ ಬೆಂಬಲ ಬೆಲೆಯಡಿ ಖರೀದಿ ಕೇಂದ್ರ ತೆರೆದು ಗೋವಿನ ಜೋಳ ಖರೀದಿ ಮಾಡಬೇಕು ಎಂದು ಆಗ್ರಹಿಸಿ ಇದೀಗ ಮತ್ತೆ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ರೈತರ ನೆರವಿಗೆ ಬರುತ್ತಿಲ್ಲ. ಗೋವಿನ ಜೋಳಕ್ಕೆ ಬೆಂಬಲ ಬೆಲೆ ನಿಗದಿ ಮಾಡಿ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸುತ್ತ ಬಂದಿದ್ದರೂ ಸರ್ಕಾರ ಮಾತ್ರ ಮೊಂಡುತನ ಪ್ರದರ್ಶಿಸುತ್ತಿದೆ. ಕೂಡಲೇ ಸರ್ಕಾರ ಖರೀದಿ ಕೇಂದ್ರ ತೆರೆದು ರೈತರ ನೆರವಿಗೆ ಧಾವಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

Tags:

error: Content is protected !!