Bagalkot

ಲೋಕಾಪುರವನ್ನು ತಾಲೂಕಾ ಕೇಂದ್ರವನ್ನಾಗಿಸಿ…

Share

ಬೆಳಗಾವಿ ಜಿಲ್ಲಾ ವಿಭಜನೆಯ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ, ಈಗ ಬಾಗಲಕೋಟೆ ಜಿಲ್ಲೆಯಲ್ಲೂ ನೂತನ ತಾಲೂಕು ರಚನೆಯ ಹೋರಾಟ ತೀವ್ರಗೊಂಡಿದೆ. ಮುಧೋಳ ತಾಲೂಕಿನ ಲೋಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ಸುತ್ತಮುತ್ತಲಿನ 33 ಗ್ರಾಮಗಳ ನೂರಾರು ಸಾರ್ವಜನಿಕರು ಬಾಗಲಕೋಟೆಯ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಮುಧೋಳ ತಾಲೂಕಿನ ಲೋಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಬಾಗಲಕೋಟೆಯ ಜಿಲ್ಲಾಡಳಿತ ಭವನದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಲೋಕಾಪುರ ಪಟ್ಟಣವು ತಾಲೂಕು ಕೇಂದ್ರಕ್ಕೆ ಬೇಕಾದ ಪೂರಕ ಭೌಗೋಳಿಕ ವ್ಯಾಪ್ತಿ ಹಾಗೂ ಮೂಲಸೌಕರ್ಯಗಳನ್ನು ಹೊಂದಿದ್ದರೂ, ಸರ್ಕಾರ ಈ ಭಾಗದ ಜನರ ಬೇಡಿಕೆಯನ್ನು ನಿರ್ಲಕ್ಷಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಸ್ತುತ ಲೋಕಾಪುರ ಭಾಗದ 33 ಹಳ್ಳಿಗಳಿಗೆ ಮುಧೋಳ ತಾಲೂಕು ಕೇಂದ್ರವು ಬಹಳ ದೂರವಿದ್ದು, ದೈನಂದಿನ ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರು ಹತ್ತಾರು ಕಿಲೋಮೀಟರ್ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಸಾಮಾನ್ಯ ಜನರಿಗೆ ತೀವ್ರ ತೊಂದರೆಯಾಗುತ್ತಿದ್ದು, ಲೋಕಾಪುರವನ್ನು ಶೀಘ್ರವೇ ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಪ್ರತಿಭಟನಾ ನಿರತರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸುತ್ತಮುತ್ತಲಿನ ಎಲ್ಲಾ ಗ್ರಾಮಸ್ಥರು ಒಮ್ಮತದಿಂದ ಈ ಹೋರಾಟಕ್ಕೆ ಬೆಂಬಲ ನೀಡಿದ್ದು, ಮುಂಬರುವ ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Tags:

error: Content is protected !!