goa

ಗೋವಾದ ನೈಟ್‌’ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 23 ಮಂದಿ ದುರ್ಮರಣ!

Share

ಗೋವಾದ ಪ್ರಸಿದ್ಧ ಪ್ರವಾಸಿ ತಾಣ ಅರ್ಪೋರಾದಲ್ಲಿರುವ ನೈಟ್‌’ಕ್ಲಬ್‌ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 23 ಮಂದಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಸಂಭವಿಸಿದೆ.

ಗೋವಾದ ಪ್ರಸಿದ್ಧ ಪ್ರವಾಸಿ ತಾಣ ಅರ್ಪೋರಾದಲ್ಲಿರುವ ನೈಟ್‌ಕ್ಲಬ್‌ವೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 23 ಮಂದಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ವರದಿಯಾಗಿದೆ. ನೈಟ್‌ಕ್ಲಬ್‌ನಲ್ಲಿ ಡ್ಯಾನ್ಸ್ ಕಾರ್ಯಕ್ರಮ ನಡೆಯುತ್ತಿದ್ದಾಗ, ಎಲೆಕ್ಟ್ರಿಕ್ ಪೈರೋ ಗನ್ ಹಾರಿಸಿದ ಕಾರಣದಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಈ ಘಟನೆಯಿಂದಾಗಿ ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡಕ್ಕೆ ಆವರಿಸಿಕೊಂಡಿದ್ದು, ಕ್ಲಬ್‌ನಲ್ಲಿದ್ದ ಬಹುತೇಕ ಜನರು ಬೆಂಕಿಗೆ ಆಹುತಿಯಾಗಿದ್ದಾರೆ. ಈ ದುರಂತದಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಘಟನೆ ಸಂಭವಿಸಿದ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದನ್ನು ತಿಳಿಯಲು ಪೊಲೀಸರು ಮತ್ತು ಸಂಬಂಧಪಟ್ಟ ಇಲಾಖೆಗಳು ಕೂಲಂಕುಷ ತನಿಖೆಯನ್ನು ಆರಂಭಿಸಿವೆ. ಈ ದುರ್ಘಟನೆಯು ಗೋವಾ ರಾಜ್ಯದಲ್ಲಿ ತೀವ್ರ ಆಘಾತವನ್ನುಂಟು ಮಾಡಿದ್ದು, ಸ್ಥಳೀಯರು ಮತ್ತು ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದೆ.

Tags:

error: Content is protected !!