ಆರ್.ಎಸ್.ಎಸ್ ಮತ್ತು ಬಿಜೆಪಿಯನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ ಬೆಳಗಾವಿ ಅಧಿವೇಶನವು ಕಾಟಾಚಾರದ ಅಧಿವೇಶನವಾಗಿದೆ ಎಂದು ಶಾಸಕ ದುರ್ಯೋಧನ ಐಹೊಳೆ ಹೇಳಿದ್ದಾರೆ.

ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಸದನದಲ್ಲಿ ದ್ವೇಷ ಭಾಷಣ ವಿಧೇಯಕ ಅಂಗೀಕಾರ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಕಾಂಗ್ರೆಸ್ ನವರು ಬಿಜೆಪಿ ಆರ್.ಎಸ್.ಎಸ್ ನವರ ಮೇಲಿನ ಸಿಟ್ಟಿನಿಂದ ಈ ವಿಧೇಯಕ ಮಂಡಿಸಿದ್ದಾರೆ. ಆದರೆ ಬಿಜೆಪಿ-ಆರ್.ಎಸ್.ಎಸ್’ಅನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ ಎಂದರು. ಮುಖ್ಯಮಂತ್ರಿಯವರಿಗೆ ಚಿಕ್ಕೋಡಿ ಜಿಲ್ಲೆ ಮಾಡುವ ಮನಸ್ಸು ಇತ್ತು. ಆದರೆ ಗೋಕಾಕ, ಅಥಣಿ, ಬೈಲಹೊಂಗಲ ಜಿಲ್ಲೆಯ ಕೂಗು ಜೋರಾಗುತ್ತಿದಂತೆ ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ಘೋಷಣೆ ಮಾಡಲಿಲ್ಲ. ಬೆಳಗಾವಿ ಅಧಿವೇಶನವು ಕಾಟಾಚಾರದ ಅಧಿವೇಶನವಾಗಿದೆ. ಉತ್ತರ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಪರಿಹರಿಸುವ ಕೆಲಸ ಸರ್ಕಾರ ಮಾಡಲಿಲ್ಲ.ಇನ್ನೂ ೧೦ ದಿನಗಳ ಕಾಲ ಅಧಿವೇಶನ ನಡೆಸುವಂತೆ ಸರ್ಕಾರಕ್ಕೆ ಬಿಜೆಪಿಯಿಂದ ಪತ್ರ ನೀಡಲಾಗಿತ್ತು.ಆದ್ರೆ ಅದಕ್ಕೆ ಸರ್ಕಾರ ಒಪ್ಪಲಿಲ್ಲ.
ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ.ಕಾಂಗ್ರೆಸ್ ಶಾಸಕರಿಗೆ ಹೆಚ್ಚು ಅನುದಾನ ಹಾಗೂ ಬಿಜೆಪಿ ಶಾಸಕರಿಗೆ ಕಡಿಮೆ ಅನುದಾನ ನೀಡುತ್ತಿದೆ.ಸರ್ಕಾರದಲ್ಲಿ ದುಡ್ಡು ಇಲ್ಲ.ಸರ್ಕಾರ ದಿವಾಳಿ ಹಿಡದಿದೆ ಎಂದು ಸರ್ಕಾರದ ವಿರುದ್ಧ ಅಸಮಾಧನ ವ್ಯಕ್ತಪಡಿಸಿದರು.
