ಗೋವು ಸಂರಕ್ಷಣಾ ತಿದ್ದುಪಡಿ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸಿ ಹಿಂದೂಪರ ಸಂಘಟನೆಗಳಿಂದ ನಗರದ ಸಂಗೊಳ್ಳಿ ರಾಯಣ್ಣನ ವೃತ್ತದ ಬಳಿ ಪ್ರತಿಭಟನೆ ನಡೆಸಲಾಯಿತು.

ವಿಶ್ವ ಹಿಂದೂ ಪರಿಷದ್,ಭಜರಂಗದಳ, ಶ್ರೀರಾಮಸೇನೆ ಸಂಘಟನೆಗಳ ಕಾರ್ಯಕರ್ತರು, ವಿಧೇಯಕಕ್ಕೆ ತಿದ್ದುಪಡಿ ತರುವ ಮೂಲಕ ಸರ್ಕಾರ ಗೋ ಕಳ್ಳರಿಗೆ ನೆರವಾಗುತ್ತಿದೆ. ಗೋವು ಸಂರಕ್ಷಣಾ ವಿಧೇಯಕವನ್ನು ಯಥಾಸ್ಥಿತಿ ಮುಂದುವರೆಸಬೇಕು ಹಾಗೂ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಸಿಎಂ ಸಿದ್ದರಾಮಯ್ಯ ಅವರು ಪ್ರತಿಕೃತಿ ದಹಸುವ ಮೂಲಕ ಮಿನಿ ವಿಧಾನಸೌಧದವರೆಗೂ ಮೆರವಣಿಗೆ ಸಾಗಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ನಗರದ ತಹಶಿಲ್ದಾರರ ಮೂಲಕ ರಾಜ್ಯ ಪಾಲಕರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಶಿವಾನಂದ ಸತ್ತಿಗೇರಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.
