ಆದಿ ಜಾಂಬವ ಮಾದಿಗ ಸಮಾಜದ ಅತೀ ಉತ್ಸಾಹಿ ಹಾಗೂ ಸಕ್ರಿಯ ಕಾರ್ಯಕರ್ತರಾದ ರಾಜು ಸಾಖೆ ಅವರನ್ನು ಜಿಲ್ಲಾ ಕಾಂಗ್ರೆಸ್ ಸಫಾಯಿ ಕರ್ಮಚಾರಿ ಘಟಕದ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುರಳಿ ಅಶೋಕ್ ಸಾಲಪ್ಪ ಅವರು ರಾಜು ಸಾಖೆ ಅವರ ಸಂಘಟನಾ ಚತುರತೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ವಹಿಸಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಜನಪ್ರಿಯ ಶಾಸಕರಾದ ಆಸೀಫ್ ಸೇಠ್ ಅವರು ಭೇಟಿ ಮಾಡಿ, ಪುಷ್ಪಗುಚ್ಛ ನೀಡಿ ಅಭಿನಂದಿಸಿದರು. ಪದಗ್ರಹಣದ ಬೆನ್ನಲ್ಲೇ ರಾಜು ಸಾಕೆ ಅವರು ಇಂದು ತಮ್ಮ ಅನುಯಾಯಿಗಳೊಂದಿಗೆ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಂ., ಅವರನ್ನು ಖುದ್ದಾಗಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಆಯುಕ್ತರಿಗೆ ಸತ್ಕಾರ ನೀಡಿ, ಪಾಲಿಕೆ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು. ಇವರಿಗೆ ಆದಿ ಜಾಂಬವ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

