hubbali

ವಧು-ವರರೇ ಇಲ್ಲದೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಆರತಕ್ಷತೆ

Share

ಇಂಡಿಗೋ ವಿಮಾನಗಳಲ್ಲಿ ಪೈಲಟ್‌‌ಗಳ ಕೊರತೆ
ದೇಶದ್ಯಾಂತ ವಿಮಾನಗಳ ರದ್ದು ಆಗಿದ್ದು ಈ ಹಿನ್ನೆಲೆಯಲ್ಲಿ ವಧು-ವರರೇ ಇಲ್ಲದೆ ಹುಬ್ಬಳ್ಳಿಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಆರತಕ್ಷತೆ ಮಾಡಿದ್ದಾರೆ.

ಹೌದು ಇಂಡಿಗೋ ಏರ್‌ಲೈನ್ಸ್‌ ರದ್ದುಗೊಳಿಸಿದ ಪರಿಣಾಮ ಹುಬ್ಬಳ್ಳಿಯಲ್ಲಿ ನಡೆಯಬೇಕಾಗಿದ್ದ ನೂತನ ವಧು-ವರರ ಆರತಕ್ಷತೆ ಮದುಮಕ್ಕಳೇ ಬರಲು ಆಗದೆ, ಆನ್‌ಲೈನ್‌ ಮೂಲಕವೇ ಆರತಕ್ಷತೆ
ಹುಬ್ಬಳ್ಳಿಯಲ್ಲಿ ಅಪರೂಪದ ಪ್ರಸಂಗ ನಡೆದಿದ್ದು.

ವಧುವಿನ ತಂದೆ-ತಾಯಿಯೇ ಮಗಳು-ಅಳಿಯನ ಬದಲು ಕುಳಿತು ಆನ್‌ಲೈನ್‌ನಲ್ಲಿ ಆರತಕ್ಷತೆ
ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ಗಳಾಗಿರುವ ಹುಬ್ಬಳ್ಳಿಯ ಮೇಧಾ ಕ್ಷೀರಸಾಗರ ಹಾಗೂ ಭುವನೇಶ್ವರದ ಸಂಗಮ ದಾಸ್‌ ನವೆಂಬರ್ 23 ರಂದು ಭುವನೇಶ್ವರದಲ್ಲಿ ಮದುವೆಯಾಗಿದ್ದ ಜೋಡಿ ವಧುವಿನ ತವರು ಹುಬ್ಬಳ್ಳಿಯಲ್ಲಿ ಕಳೆದ ಬುಧವಾರ ರಂದು ಆರತಕ್ಷತೆ ಆಯೋಜನೆ ಇದಕ್ಕಾಗಿ ಹುಬ್ಬಳ್ಳಿಯ ಗುಜರಾತ್‌ ಭವನದಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿದ್ದ ಕುಟುಂಬ ಭುವನೇಶ್ವರದಿಂದ ಬೆಂಗಳೂರಿಗೆ, ಅಲ್ಲಿಂದ ಹುಬ್ಬಳ್ಳಿಗೆ ಡಿ.2ಕ್ಕೆ ವಿಮಾನ ಬುಕ್ ಮಾಡಿದ್ದ ವಧು-ವರರು ಕೆಲ ಸಂಬಂಧಿಕರಿಗೆ ಭುವನೇಶ್ವರದಿಂದ ಮುಂಬೈ, ಅಲ್ಲಿಂದ ಹುಬ್ಬಳ್ಳಿಗೆ ವಿಮಾನ ಟಿಕೆಟ್‌ ಬುಕ್‌ ಆಗಿತ್ತು ಆದ್ರೆ, ಡಿ.2ರ ಬೆಳಗ್ಗೆ 9ರಿಂದ ಮರುದಿನ (ಡಿ.3) ಬೆಳಗಿನ ಜಾವ 4-5ರವರೆಗೂ ವಿಮಾನ ವಿಳಂಬ ಏಕಾಏಕಿ 3 ರಂದು ಬೆಳಗ್ಗೆ ವಿಮಾನ ರದ್ದು ಹುಬ್ಬಳ್ಳಿಯಲ್ಲಿ ವಧುವಿನ ತಂದೆ-ತಾಯಿಯೇ ವಧು-ವರರ ಕುರ್ಚಿಯಲ್ಲಿ ಕುಳಿತು, ಶಾಸ್ತ್ರ ಅತ್ತ ವಧು-ವರ, ತಾವೂ ತಯಾರಾಗಿ ಭುವನೇಶ್ವರದಲ್ಲಿ ಭಾಗಿ
ಆನ್‌ಲೈನ್‌ (ವಿಡಿಯೋ ಕಾನ್ಫರೆನ್ಸ್‌) ಮೂಲಕವೇ ಆರತಕ್ಷತೆ ಹಾಕಿದ್ದಾರೆ.

Tags:

error: Content is protected !!