ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಾಮನೂರು ಅವರಿಗೆ ಕಳೆದೊಂದು ತಿಂಗಳಿಂದ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮುಖ್ಯಮಂತ್ರಿ ಹಾದಿಯಾಗಿ ಹಿರಿಯ ನಾಯಕರು ಶಾಮನೂರರ ಆರೋಗ್ಯ ವಿಚಾರಿಸಿದ್ದರು.
