Bagalkot

ಬಾಗಲಕೋಟೆಯಲ್ಲಿ ಮುಂದುವರೆದ ಬೀದಿ ನಾಯಿಗಳ ಅಟ್ಟಹಾಸ…!

Share

ಬಾಗಲಕೋಟೆ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಇಂದು ನವನಗರದ 15ನೇ ಸೆಕ್ಟರ್’ನಲ್ಲಿ ಭೀಕರ ಘಟನೆಯೊಂದು ಸಂಭವಿಸಿದೆ.

ಮನೆಯ ಮುಂದೆ ಆಟವಾಡುತ್ತಿದ್ದ 4ನೇ ತರಗತಿ ವಿದ್ಯಾರ್ಥಿನಿ ಅಲೈನಾ ಲೋಕಾಪೂರ ಎಂಬಾಕೆಯ ಮೇಲೆ ನಾಯಿ ಏಕಾಏಕಿ ದಾಳಿ ನಡೆಸಿದೆ. ನಾಯಿಯ ಕಚ್ಚುವಿಕೆಯಿಂದ ಬಾಲಕಿಯ ಕಣ್ಣು ಮತ್ತು ಮೂಗಿನ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಸದ್ಯ ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಗರದ ನಿವಾಸಿಗಳಲ್ಲಿ ಈಗ ಬೀದಿ ನಾಯಿಗಳ ಭಯ ಆವರಿಸಿದೆ. ಆಟವಾಡುತ್ತಿದ್ದ ಬಾಲಕಿಯನ್ನು ಗುರಿಯಾಗಿಸಿಕೊಂಡು ನಾಯಿ ಮುಖದ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದು, ಪೋಷಕರು ಕೂಡಲೇ ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ನಗರದಲ್ಲಿ ಮತ್ತೊಂದು ಮಗುವಿನ ಮೇಲೆ ನಾಯಿ ದಾಳಿ ನಡೆಸಿತ್ತು. ಸರಣಿ ಘಟನೆಗಳಿಂದ ಆಕ್ರೋಶಗೊಂಡಿರುವ ಸಾರ್ವಜನಿಕರು, ನಗರಸಭೆ ಕೂಡಲೇ ಬೀದಿ ನಾಯಿಗಳ ಹಾವಳಿ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Tags:

error: Content is protected !!