ಚಿಕ್ಕೋಡಿ ಪ್ರತ್ಯೇಕ ಜಿಲ್ಲೆಗಾಗಿ ಹೋರಾಟದ ಕಾವು ಹೆಚ್ಚಾಗಿದ್ದು,ಇವತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಬೆಂಬಲ ಸೂಚಿಸಿದರು.

ಜಿಲ್ಲಾ ಹೋರಾಟ ಸಮಿತಿಯ ಸದಸ್ಯರು ಹೋರಾಟಕ್ಕೆ ವಿದ್ಯಾರ್ಥಿಗಳು ಬೆಂಬಲ ಸೂಚಿಸಿ ಜಿಲ್ಲೆ ಆಗಬೇಕೆಂದು ಆಗ್ರಹಿಸಿದರು.ಪಟ್ಟಣದ ಬಸವವೃತ್ತದಲ್ಲಿ ವಿದ್ಯಾರ್ಥಿಗಳು ರಸ್ತೆ ತಡೆದು ಮಾನವ ಸರಪಳಿ ನಿರ್ಮಿಸಿ ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಮಾಡಬೇಕು ಎಂದು ಪಟ್ಟು ಹಿಡಿದರು.ಬಳಿಕ ತಹಶಿಲ್ದಾರ ಕಚೇರಿಗೆ ತೆರಳಿ ಗ್ರೇಡ-೨ ತಹಶೀಲ್ದಾರ ಪರಮಿಳಾ ದೇಶಪಾಂಡೆ ಮೂಲಕ ಮುಖ್ಯಂತ್ರಿಗಳಿಗೆ ಮನವಿಯನ್ನು ಸಲ್ಲಿಸಿದರು. ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಎಸ್.ವೈ.ಹಂಜಿ ಮಾತನಾಡಿ ಜಿಲ್ಲಾ ಹೋರಾಟಕ್ಕೆ ವಿದ್ಯಾರ್ಥಿಗಳು ಬೆಂಬಲ ಸೂಚಿಸಿದ್ದು ಹೋರಾಟಕ್ಕೆ ಮತ್ತಷ್ಟು ಶಕ್ತಿ ಬಂದಿದೆ.ಅಧಿವೇಶನದಲ್ಲಿ ನಮ್ಮ ಭಾಗದ ಜನಪ್ರತಿನಿಧಿಗಳು ಧ್ವನಿ ಎತ್ತಿರುವುದು ಸ್ವಾಗತಾರ್ಹ ಎಂದರು.
ಬಳಿಕ ಜಿಲ್ಲಾ ಹೋರಾಟ ಸಮಿತಿಯ ಹಿರಿಯ ಸದಸ್ಯ ರುದ್ರಪ್ಪ ಸಂಗಪ್ಪಗೊಳ ಮಾತನಾಡಿ ನಮ್ಮ ಹೋರಾಟಕ್ಕೆ ಜನಪ್ರತಿನಿಧಿಗಳು ಧ್ವನಿಗೂಡಿಸುತ್ತಿದ್ದಾರೆ.ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಆಗುತ್ತೆ ಎಂಬ ಆಶಾಭಾವನೆ ಮೂಡಿದೆ ಎಂದರು.
ಈ ಸಂದರ್ಭದಲ್ಲಿ ಸುರೇಶ ಬ್ಯಾಕೂಡೆ,ನಾಗೇಶ ಮಾಳಿ,ಕೃಷ್ಣಾ ಕೆಂಚನ್ನವರ,ರಮೇಶ ಬಸ್ತವಾಡೆ,ಚನ್ನಪ್ಪ ಬಡಿಗೇರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
