400 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಪರಮೇಶ್ವರ ಅವರು ತಳ್ಳಿಹಾಕಿದರು. “ನಮ್ಮ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಪ್ರಸ್ತುತ ಮಹಾರಾಷ್ಟ್ರ ಪೊಲೀಸರು ಇದರ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಎಸ್‌ಐಟಿ (SIT) ವರದಿ ಬರಬೇಕಿದೆ. ವರದಿ ಬಂದ ನಂತರವೇ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತಿಳಿಯಲಿದೆ ಎಂದಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು. ಬೆಳಗಾವಿ ಗಡಿಯಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸರು ಭಾಗಿಯಾಗಿದ್ದಾರೆ ಎಂಬ ಆರೋಪವನ್ನು ಪರಮೇಶ್ವರ ಅವರು ತಳ್ಳಿಹಾಕಿದರು. “ನಮ್ಮ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಪ್ರಸ್ತುತ ಮಹಾರಾಷ್ಟ್ರ ಪೊಲೀಸರು ಇದರ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಎಸ್‌ಐಟಿ (SIT) ವರದಿ ಬರಬೇಕಿದೆ. ವರದಿ ಬಂದ ನಂತರವೇ ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತಿಳಿಯಲಿದೆ,” ಎಂದು ಮೈಸೂರಿನಲ್ಲಿ ಹೇಳಿದರು.
ಸಚಿವರ ಹೇಳಿಕೆಯ ಸಾರಾಂಶ ಇಲ್ಲಿದೆ: ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿಯನ್ನು ಗೃಹ ಸಚಿವರು ಬಲವಾಗಿ ನಿರಾಕರಿಸಿದ್ದಾರೆ. “ಜಾರ್ಜ್ ಅವರ ರಾಜೀನಾಮೆ ವಿಚಾರ ಕೇವಲ ಊಹಾಪೋಹ. ಹಳೆಯ ಮತ್ತು ಹೊಸ ಸ್ನೇಹಿತರು ಸೇರಿ ಬೇರೆ ಬೇರೆ ಕಾರಣಗಳಿಗಾಗಿ ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸಿದ್ದಾರೆ. ಅಂತಹ ಯಾವುದೇ ಘಟನೆ ನಡೆದಿಲ್ಲ ಮತ್ತು ಸ್ವತಃ ಜಾರ್ಜ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ,” ಎಂದು ಅವರು ತಿಳಿಸಿದರು.
ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಎನ್.ಸಿ.ಬಿ (NCB) ದಾಳಿಯ ಕುರಿತು ಮಾಹಿತಿ ನೀಡಿದ ಸಚಿವರು, ಅದು ಕೇವಲ ಒಂದು ‘ಫಾಲೋ-ಅಪ್’ ಕೇಸ್ ಅಷ್ಟೇ ಹೊರತು ಅಲ್ಲಿ ಯಾವುದೇ ಮಾದಕ ವಸ್ತುಗಳು ಪತ್ತೆಯಾಗಿಲ್ಲ ಎಂದರು. “ದಾಳಿ ನಡೆದದ್ದು ಫಿನಾಯಿಲ್ ತಯಾರಿಸುವ ಫ್ಯಾಕ್ಟರಿಯ ಮೇಲೆ. ಅಲ್ಲಿ ಡ್ರಗ್ಸ್ ತಯಾರಿಕೆಗೆ ಸಂಬಂಧಿಸಿದ ಯಾವುದೇ ಕಚ್ಚಾ ವಸ್ತುಗಳು ಸಿಕ್ಕಿಲ್ಲ. ಈ ಹಿಂದೆ ಬಂಧಿತರಾದ ಆರೋಪಿಗಳ ಸಂಬಂಧಿಕರು ಇಲ್ಲಿರುವ ಕಾರಣ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಇಲ್ಲಿ ಯಾರನ್ನೂ ವಶಕ್ಕೆ ಪಡೆದಿಲ್ಲ,” ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಈ ಹಿಂದೆ ನಡೆದ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಪ್ರಕರಣಗಳ ಕುರಿತು ಸದನದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, “ಈ ಪ್ರಕರಣಗಳು ಸದ್ಯ ನ್ಯಾಯಾಲಯದ ಹಂತದಲ್ಲಿವೆ. ತನಿಖೆ ಮತ್ತು ಕಾನೂನು ಪ್ರಕ್ರಿಯೆಗಳು ನಡೆಯುತ್ತಿರುವಾಗ, ಪೊಲೀಸರಿಗೆ ಇಂತಹುದೇ ರೀತಿ ವಿಚಾರಣೆ ನಡೆಸಿ ಎಂದು ನಿರ್ದೇಶನ ನೀಡಲು ಸಾಧ್ಯವಿಲ್ಲ. ನ್ಯಾಯಾಲಯದ ತೀರ್ಮಾನಕ್ಕೆ ನಾವು ಕಾಯಬೇಕಿದೆ,” ಎಂದರು.
