Dharwad

ಧಾರವಾಡದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ…..

Share

ನಾಡಿನಾದ್ಯಂತ ಇಂದು 77ನೇ ಗಣರಾಜೋತ್ಸವ ಸಂಭ್ರಮ ಮನೆ ಮಾಡಿದ್ದು, ಧಾರವಾಡದಲ್ಲೂ ತ್ರಿವರ್ಣ ಸಂಭ್ರಮ ಜೋರಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಧ್ವಾಜಾರೋಣ ನೇರೆವರಿಸಿದರು.

 

ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ವತಿಯಿಂದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಜರುಗಿತ್ತು. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಮಿಕ ಇಲಾಖೆಯ ಸಚಿವರಾದ ಸಂತೋಷ ಲಾಡ್ ಅವರು, ಧ್ವಜಾರೋಣ ಮುನ್ನ ಮಹಾತ್ಮಾ ಗಾಂಧಿಜೀ ಹಾಗೂ ಸಂವಿಧಾನ ಶಿಲ್ಫಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನೀಡಿದರು.‌ ಬಳಿಕ ಧ್ವಜಾರೋಹಣ ನೆರವೇರಿಸುವ ಮೂಲಕ ಗಣರಾಜ್ಯೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿದರು. ಸಚಿವರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯ್ತಿ ಸಿಇಓ ಭುವನೇಶ ಪಾಟೀಲ, ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಎಸ್‌ಪಿ ಗುಂಜನ್ ಆರ್ಯ ಸೇರಿದಂತೆ ಅನೇಕರು ಸಾಥ್ ನೀಡಿದರು. ನಂತರ ಜಿಲ್ಲಾ ಪೊಲೀಸರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅಲ್ಲದೇ ಸಚಿವ ಸಂತೋಷ ಲಾಡ್ ಅವರು ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. ಈ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧಾರವಾಡದ ವಿವಿಧ ಶಾಲೆ, ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರೂ ಪಾಲ್ಗೊಂಡು ಸಂಭ್ರಮ ಕಳೆ ಹೆಚ್ಚಿಸಿದರು.

 

Tags:

error: Content is protected !!