ನಿನ್ನೆ ರಾಜ್ಯ ಮತ್ತು ದೇಶದಲ್ಲಿ ರಾಜ್ಯ ಸರಕಾರ ಮತ್ತು ರಾಜ್ಯ ಪೋಲಿಸ್ ಇಲಾಖೆಯನ್ನು ಭಾರೀ ಮುಜುಗರಕ್ಕೆ ಇಡು ಮಾಡಿದ ಡಿಜಿಪಿಯ ರಾಸಲೀಲೆ ಪ್ರಕರಣ ಸಂಬಂಧಿಸಿದಂತೆ ಗೃಹ ಸಚಿವ ಜಿ ಪರಮೇಶ್ವರ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತ್ನಾಡಿ ಹಿರಿಯ ಪೋಲಿಸ್ ಅಧಿಕಾರಿಯನ್ನು ಸಸ್ಪಂಡ ಮಾಡಿ ಆದೇಶ ಹೊರಡಿಸಿದ್ದಾರೆ.

ಹೌದು, ನಿನ್ನೆಯಿಂದ ಮಾಧ್ಯಮ ಸೇರಿದಂತೆ ಸೊಷೀಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದ್ದ ಡಿಜೆಪಿಯ ಮಹಿಳೆಯೊಂದಿಗಿನ ರಾಸಲೀಲೆ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ಡಾ. ರಾಮಚಂದ್ರ ರಾವ್ ಅವರನ್ನು ಕರ್ನಾಟಕ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಸರ್ಕಾರಿ ನೌಕರರಿಗೆ ಶೋಭೆಯಲ್ಲದ ರೀತಿಯಲ್ಲಿ ವರ್ತಿಸಿರುವ ಆರೋಪದಡಿ, ಅಖಿಲ ಭಾರತ ಸೇವೆಗಳ ನಡತೆ ನಿಯಮಗಳು,ಪ್ರಕಾರ 1968 ರ ನಿಯಮ 3ರ ಉಲ್ಲಂಘನೆಯಾಗಿದೆ ಎಂದು ಹೇಳಿ, ವಿಚಾರಣೆ ಬಾಕಿ ಇರಿಸಿ ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
