hubbali

ರಾಜ್ಯಪಾಲರ ನಡೆ ಖಂಡನಾರ್ಹ : ಸಲೀಂ ಅಹ್ಮದ್

Share

ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ್ದ ಭಾಷಣದ ಬದಲು, ತಮ್ಮದೇ ಕೆಲವು ಸಾಲುಗಳನ್ನು ಓದಿ ರಾಜ್ಯಪಾಲರು ಸದನದಿಂದ ಹೊರನಡೆದಿರುವುದು ವಿಷಾದದ ಸಂಗತಿ’ ಎಂದು ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು,
ರಾಜ್ಯಪಾಲರ ಹುದ್ದೆಯು ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡುವ ಮೊದಲ ಕರ್ತವ್ಯವನ್ನು ಹೊಂದಿದೆ. ಅವರು ರಾಜಕೀಯವಾಗಿ ತಟಸ್ಥ ನಿಲುವು ಹೊಂದಿರಬೇಕು. ಆದರೆ, ಥಾವರಚಂದ್ ಗೆಹಲೋತ್ ಅವರು ಒಂದು ರಾಜಕೀಯ ಪಕ್ಷದ ಮುಖವಾಣಿಯಂತೆ ನಡೆದುಕೊಳ್ಳುತ್ತಿರುವುದು ಬಹಿರಂಗವಾಗಿದೆ’ ಎಂದು ಆರೋಪಿಸಿದ್ದಾರೆ.

‘ಸರ್ಕಾರದ ನಿಲುವುಗಳನ್ನು ಪ್ರತಿಬಿಂಬಿಸುವ ಭಾಷಣವನ್ನು ಪೂರ್ಣಪ್ರಮಾಣದಲ್ಲಿ ಅವರು ಓದಲೇಬೇಕಿತ್ತು. ಇದು ಅವರ ಕರ್ತವ್ಯವೂ ಹೌದು. ಆದರೆ, ನಿರಾಕರಿಸುವ ಮೂಲಕ ರಾಜ್ಯದ ಜನರನ್ನು ಅವಮಾನಿಸಿದ್ದಾರೆ. ಇಂತಹ ನಡವಳಿಕೆ ಸಮರ್ಪಕವಲ್ಲ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕಾದವರೇ ರೂಪಿತ ನಿಯಮಗಳನ್ನು ಉಲ್ಲಂಘಿಸುವುದು ಹುದ್ದೆಗೆ ಶೋಭೆ ತರುವಂಥದ್ದಲ್ಲ’ ಎಂದಿದ್ದಾರೆ. ಇನ್ನು ರಾಜ್ಯಪಾಲರ ವಿರುದ್ಧ ನಮ್ಮ ಪಕ್ಷದ ವರಿಷ್ಠರು ಹಾಗೂ ಕಾನೂನು ತಜ್ಞರ ಜೊತೆಗೆ ಸಲಹೆ ಪಡೆದು ಏನು ಮಾಡಬೇಕು ಎಂಬ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

Tags:

error: Content is protected !!