Savadatti

ಸವದತ್ತಿ: ಶ್ರೀ ಬೀರೇಶ್ವರ ದೇವಸ್ಥಾನಕ್ಕೆ ಕನ್ನ ಹಾಕಿದ ಖದೀಮರು; ಬೆಳ್ಳಿ ಕುದುರೆ, ಬಂಗಾರ ಕಳವು!

Share

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಧುಪದಾಳ ಗ್ರಾಮದಲ್ಲಿ ತಡರಾತ್ರಿ ಖದೀಮರು ಕೈಚಳಕ ತೋರಿಸಿದ್ದಾರೆ. ಗ್ರಾಮದ ಸುಪ್ರಸಿದ್ಧ ಬೀರೇಶ್ವರ ದೇವಸ್ಥಾನದ ಬಾಗಿಲು ಮುರಿದು ಬೆಳ್ಳಿ ಮತ್ತು ಚಿನ್ನಾಭರಣಗಳನ್ನು ದೋಚಿರುವ ಕಿರಾತಕರು, ದೇವರ ಮೂರ್ತಿಯನ್ನೇ ಹೊತ್ತೊಯ್ದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದಾರೆ.

ಸವದತ್ತಿ ತಾಲೂಕಿನ ಧುಪದಾಳ ಗ್ರಾಮದ ಬೀರೇಶ್ವರ ದೇವಸ್ಥಾನದಲ್ಲಿ ಈ ಕಳ್ಳತನ ನಡೆದಿದೆ. ದೇವಸ್ಥಾನದ ಗರ್ಭಗುಡಿಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಸುಮಾರು 2 ಕೆಜಿ ತೂಕದ ಬೆಳ್ಳಿಯ ಕುದುರೆ ಹಾಗೂ ಎರಡು ಚಿನ್ನದ ಸರಗಳನ್ನು ದೋಚಿದ್ದಾರೆ. ದೇವಸ್ಥಾನದ ಆಭರಣಗಳ ಮೇಲೆ ಕಣ್ಣಿಟ್ಟಿದ್ದ ಖದೀಮರು ಯಾರಿಗೂ ತಿಳಿಯದಂತೆ ರಾತ್ರೋರಾತ್ರಿ ಈ ಕೃತ್ಯ ಎಸಗಿದ್ದಾರೆ.

ಆಭರಣಗಳ ಜೊತೆಗೆ ಬೀರೇಶ್ವರ ದೇವರ ಕಂಚಿನ ಮೂರ್ತಿಯನ್ನೂ ಸಹ ಖದೀಮರು ಹೊತ್ತೊಯ್ದಿದ್ದರು. ಆದರೆ, ಕಳ್ಳತನದ ಬಳಿಕ ಗ್ರಾಮದ ಹೊರವಲಯದಲ್ಲಿ ದೇವರ ಮೂರ್ತಿಯನ್ನು ಎಸೆದು ಪರಾರಿಯಾಗಿದ್ದಾರೆ. ಈ ಘಟನೆಯ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ದೇವಸ್ಥಾನದಲ್ಲಿ ಕಳ್ಳತನ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕ ಮತ್ತು ಆಕ್ರೋಶ ಮೂಡಿಸಿದೆ.

Tags:

error: Content is protected !!