ಲೋಂಡಾ ಗ್ರಾಮದಲ್ಲಿ ನಮ್ಮ ಕರ್ನಾಟಕ ಯುವರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಡಾ. ಸುನೀಲ ಎಂ.ಎಸ್ ಅವರು ಭೇಟಿ ನೀಡಿ ಲೋಂಡಾ ಬಸ್ ನಿಲ್ದಾಣವನ್ನು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಮಾತನಾಡಿದ ಅವರು, ಇಲ್ಲಿನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಅಗತ್ಯವಾದ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದಿರುವುದು ಅತ್ಯಂತ ಖೇದಕರ ಸಂಗತಿ ಎಂದು ಹೇಳಿದರು.
ಬಸ್ ನಿಲ್ದಾಣದಲ್ಲಿ ಸರಿಯಾದ ರಸ್ತೆ ವ್ಯವಸ್ಥೆ ಇಲ್ಲ, ವಿದ್ಯುತ್ ವ್ಯವಸ್ಥೆ ಸಂಪೂರ್ಣವಾಗಿ ಕೊರತೆಯಾಗಿದೆ, ಹಾಗೂ ಕಂಟ್ರೋಲರ್ ವ್ಯವಸ್ಥೆ ಕಳೆದ ನಾಲ್ಕು ವರ್ಷಗಳಿಂದ ಇಲ್ಲ ಎಂದು ಅವರು ಆರೋಪಿಸಿದರು. ಇದಲ್ಲದೆ, ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಶೌಚಾಲಯದ ವ್ಯವಸ್ಥೆ ಇಲ್ಲ, ಮತ್ತು ಶಾಲಾ ಮಕ್ಕಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದಿರುವುದು ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಮಹಿಳೆಯರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ತಿಳಿಸಿದರು.
ಈ ಎಲ್ಲಾ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಡಾ. ಸುನೀಲ ಎಂ.ಎಸ್ ಅವರು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳಿಗೆ ಪರಿಹಾರ ಒದಗಿಸದಿದ್ದಲ್ಲಿ, ಕರ್ನಾಟಕ ಯುವರಕ್ಷಣಾ ವೇದಿಕೆ ವತಿಯಿಂದ ದೊಡ್ಡ ಮಟ್ಟದ ಉಗ್ರ ಹೋರಾಟ ಹಾಗೂ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.
londa
ಲೋಂಡಾ ಬಸ್ ನಿಲ್ದಾಣದ ದುರವಸ್ಥೆ: ತಕ್ಷಣ ಕ್ರಮಕೈಗೊಳ್ಳದಿದ್ದರೆ ಉಗ್ರ ಹೋರಾಟ – ಡಾ. ಸುನೀಲ ಎಂ.ಎಸ್ ಎಚ್ಚರಿಕೆ
