Accident

ಅತಿವೇಗಕ್ಕೆ ಬಲಿಯಾದ ಒಂಬತ್ತು ವರ್ಷದ ಕಂದಮ್ಮ: ಟೈರ್ ಸಿಡಿದು ಮರಕ್ಕೆ ಡಿಕ್ಕಿ ಹೊಡೆದ ಕಾರು

Share

ಕಾರಿನ ಟೈರ್ ಸಿಡಿದು ಮರಕ್ಕೆ ಡಿಕ್ಕಿ ಹೊಡೆದ ಭೀಕರ ಅಪಘಾತದಲ್ಲಿ 9 ವರ್ಷದ ಬಾಲಕ ಮೃತಪಟ್ಟಿರುವ ದುರ್ಘಟನೆ ಧಾರವಾಡ-ರಾಮನಗರ ಹೆದ್ದಾರಿಯಲ್ಲಿ ಸಂಭವಿಸಿದೆ.

ಬೆಂಗಳೂರು ಮೂಲದ ಅಕ್ಷಯ್ ಎಂಬುವವರು ತಮ್ಮ ಕೆಐಎ (KIA) ಕಾರಿನಲ್ಲಿ ಅಳ್ನಾವರದಿಂದ ರಾಮನಗರದ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅತಿವೇಗವಾಗಿ ಚಲಿಸುತ್ತಿದ್ದ ಕಾರಿನ ಬಲಭಾಗದ ಟೈರ್ ದಿಢೀರ್ ಸಿಡಿದ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಬದಿಯ ಮರಕ್ಕೆ ವೇಗವಾಗಿ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಒಳಗೆ ಕುಳಿತಿದ್ದವರಿಗೆ ಗಂಭೀರ ಗಾಯಗಳಾಗಿವೆ.

ಈ ದುರ್ಘಟನೆಯಲ್ಲಿ ಚಾಲಕ ಅಕ್ಷಯ್ ಅವರ 9 ವರ್ಷದ ಮಗ ಹಿಯಾಂಶ್ ತಲೆ ಮತ್ತು ಕಾಲಿಗೆ ಬಲವಾದ ಪೆಟ್ಟು ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ವಾಹನದಲ್ಲಿದ್ದ ಮತ್ತಿಬ್ಬರು ಮಕ್ಕಳು ಸೇರಿದಂತೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Tags:

error: Content is protected !!