Khanapur

ಅಲೆಮಾರಿ ಸಮುದಾಯಗಳಿಗೆ ಶೀಘ್ರವೇ ಗುರುತಿನ ಚೀಟಿ, ಸೌಲಭ್ಯ: ಜಿಲ್ಲಾಧಿಕಾರಿಗಳ ಭರವಸೆ

Share

ಖಾನಾಪುರ ಭಾಗದ ಅಲೆಮಾರಿ ಸಮುದಾಯಗಳಾದ ಹಕ್ಕಿ ಪಕ್ಕಿ ಹಾಗೂ ಕಾತಕರಿ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಜಿಲ್ಲಾಡಳಿತ ಮುಂದಾಗಿದೆ. ಇಂದು ಖಾನಾಪುರ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಈ ಸಮುದಾಯಗಳ ದಶಕಗಳ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ.

ಖಾನಾಪುರ ತಾಲೂಕಿನ ಹಕ್ಕಿ ಪಕ್ಕಿ ಹಾಗೂ ಕಾತಕರಿ ಸಮುದಾಯದ ಜನರಿಗೆ ಅಗತ್ಯವಾಗಿರುವ ಗುರುತಿನ ಚೀಟಿ, ಪಡಿತರ ಚೀಟಿ ಹಾಗೂ ಜಾತಿ ಪ್ರಮಾಣ ಪತ್ರ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅತಿ ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ತಿಳಿಸಿದರು. ಇಂದು ಖಾನಾಪುರ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ಸಮನ್ವಯ ಸಭೆಯ ಬಳಿಕ ಅವರು ಮಾತನಾಡಿದರು. ಈ ಸಮುದಾಯಗಳ ಅಭಿವೃದ್ಧಿಗೆ ಇರುವ ಅಡೆತಡೆಗಳನ್ನು ನಿವಾರಿಸಿ, ಸರ್ಕಾರದ ಸೌಲಭ್ಯಗಳು ನೇರವಾಗಿ ಅವರಿಗೆ ತಲುಪುವಂತೆ ಮಾಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಬೆಳಗಾವಿ ಉಪ ವಿಭಾಗಾಧಿಕಾರಿಗಳು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಇದೇ ವೇಳೆ ಬೆಳಗಾವಿ ದೌರ್ಜನ್ಯ ಸಮಿತಿ ಸದಸ್ಯರಾದ ಮಲ್ಲೇಶ್ ಚೌಗಲಾ, ರಾಜಶೇಖರ ಹಿಂಡಲಗಿ, ಜಿಲ್ಲಾಧ್ಯಕ್ಷ ದುರಗಪ್ಪ ದಂಡಿನವರ ಸೇರಿದಂತೆ ಪ್ರಮುಖ ಮುಖಂಡರು ಸಮುದಾಯದ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಸಭೆಯಲ್ಲಿ ವಿಠ್ಠಲ ಸಗರಮನವರ, ರಾಘವೇಂದ್ರ ಚಲವಾದಿ, ಸಂದೀಪ ಚಲವಾದಿ ಹಾಗೂ ದಯಾನಂದ ಆದಿವಾಸಿ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದು, ತಮ್ಮ ಬೇಡಿಕೆಗಳ ಕುರಿತು ಚರ್ಚಿಸಿದರು.

ಖಾನಾಪುರ ಭಾಗದ ಅಲೆಮಾರಿ ಸಮುದಾಯಗಳಾದ ಹಕ್ಕಿ ಪಕ್ಕಿ ಹಾಗೂ ಕಾತಕರಿ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಲು ಜಿಲ್ಲಾಡಳಿತ ಮುಂದಾಗಿದೆ. ಇಂದು ಖಾನಾಪುರ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಈ ಸಮುದಾಯಗಳ ದಶಕಗಳ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ.

Tags:

error: Content is protected !!