Gadag

ಗದಗ ಜಿಲ್ಲಾ ನ್ಯಾಯಾಲಯಕ್ಕೂ ಆತ್ಮಾಹುತಿ ಬಾಂಬ್ ಬೆದರಿಕೆ!!!!

Share

ಗದಗ ಜಿಲ್ಲಾ ನ್ಯಾಯಾಲಯಕ್ಕೆ ಆತ್ಮಾಹುತಿ ಬಾಂಬ್ ಬೆದರಿಕೆ ಇಮೇಲ್ ಬಂದಿರುವ ಹಿನ್ನಲೆಯಲ್ಲಿ ಮಂಗಳವಾರ ಭದ್ರತಾ ಕ್ರಮಗಳನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟುಗೊಳಿಸಿದೆ.

ಗದಗ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಅಧಿಕೃತ ಇಮೇಲ್‌ಗೆ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯ ಆವರಣದಲ್ಲಿ ಸಂಪೂರ್ಣ ಪರಿಶೀಲನೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮೂರು ಅಂತಸ್ತಿನ ನ್ಯಾಯಾಲಯ ಕಟ್ಟಡದ ಎಲ್ಲಾ ರೂಮ್‌ಗಳು, ಸಾರ್ವಜನಿಕ ಸ್ಥಳಗಳು ಹಾಗೂ ಆವರಣವನ್ನು ಶ್ವಾನದಳ ಮತ್ತು ಬಾಂಬ್ ಶೋಧನಾ ದಳದಿಂದ ತಪಾಸಣೆ ನಡೆಸಲಾಗುತ್ತಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಮೇಲ್ನೋಟಕ್ಕೆ ಈ ರೀತಿಯ ಇಮೇಲ್‌ಗಳು ಹಲವು ಕಡೆಗಳಿಗೆ ಹೋಗಿರುವ ಮಾಹಿತಿ ಇದ್ದು, ಜನರಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಇಂತಹ ಬೆದರಿಕೆ ಸಂದೇಶಗಳನ್ನು ಕಳುಹಿಸಲಾಗುತ್ತಿದೆ ಎಂದು ಎಸ್‌ಪಿ ರೋಹನ್ ಜಗದೀಶ್ ತಿಳಿಸಿದ್ದಾರೆ.
ಈ ಇಮೇಲ್ ಎಲ್ಲಿಂದ ಬಂದಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದ್ದು, ಸಂಪೂರ್ಣ ಮಾಹಿತಿ ತನಿಖೆ ಮುಗಿದ ನಂತರ ನೀಡಲಾಗುವುದು ಎಂದು ಗದಗ ಎಸ್‌ಪಿ ಸ್ಪಷ್ಟಪಡಿಸಿದ್ದಾರೆ.

Tags:

error: Content is protected !!