ಬೈಕನಲ್ಲಿ ಬಂದ ಖದೀಮ ಕಳ್ಳರು ಮಹಿಳೆಯ ಕೊರಳಿನಲ್ಲಿದ್ದ ಚಿನ್ನದ ಸರ್ ಕಿತ್ತುಕೊಂಡು ಹೋಗಿರುವ ಘಟನೆ ಧಾರವಾಡದಲ್ಲಿ ನಡೆದಿದ್ದು, ಸ್ಥಳೀಯರು ಬೆಚ್ಚಿಬಿದಿದ್ದಾರೆ. ಕಳ್ಳರ ಕೃತ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ವೈ ಧಾರವಾಡ ಗಾಂಧಿ ನಗರದ ಬಳಿಯಲ್ಲಿ ಶನಿವಾರದಂದು ಈ ಘಟನೆ ನಡೆದಿದ್ದು, ಖದೀಮ ಕಳ್ಳರ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ಕುರಿತು ಈಗಾಗಲೇ ಧಾರವಾಡ ವಿದ್ಯಾಗಿರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದು, ಕಳ್ಳರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
