hubbali

ಕಟೌಟ್ ಬಿದ್ದು ಮೂವರು ಗಂಭೀರ ಗಾಯ

Share

ಮಂಟೂರ ರಸ್ತೆಯಲ್ಲಿ ಕೊಳಗೇರಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಮಂಟೂರ ರಸ್ತೆಯ ಅಕ್ಕಪಕ್ಕ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ ಅಳವಡಿಸಲಾಗಿತ್ತು. ಸಿಎಂ ಮತ್ತು ಸಚಿವ ಜಮೀರ್ ಅವರ ಕಟೌಟ್ ಬಿದ್ದು ಅದರ ಕೆಳಗಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕೆಎಂಸಿ-ಆರ್‌ಐ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags:

error: Content is protected !!