sucide

ಮೊಬೈಲ್‌ ಕೊಡಿಸದ್ದಕ್ಕೆ 10 ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆ

Share

ಮೊಬೈಲ್ ಫೋನ್ ಬೇಡಿದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗೆ ಪಾಲಕರು ನೀಡಲು ನಿರಾಕರಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ನಿಪ್ಪಾಣಿ ತಾಲೂಕಿನ ಸಿದ್ನಾಳ ಗ್ರಾಮದಲ್ಲಿ ನಡೆದಿದೆ.

ರುತೇಶ್ ವಿಜಯ ನಲವಡೆ(16) ಎಂಬಾತನೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ, ರುತೇಶ ಅಕ್ಕೋಳ ಗ್ರಾಮದಲ್ಲಿನ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ. ನನಗೆ ಮೊಬೈಲ್ ಫೋನ್ ಕೊಡಿಸಿ ಎಂದು ಪಾಲಕರಿಗೆ ಹೇಳಿದ್ದ. ಪೋಷಕರು 10ನೇ ತರಗತಿ ಪರೀಕ್ಷೆ ಮುಗಿದ ನಂತರ ಮೊಬೈಲ್ ಫೋನ್ ಕೊಡಿಸುವುದಾಗಿ ಹೇಳಿದ್ದರು. ಆದರೆ ಸಂಜೆ ಹೊತ್ತಿಗೆ ಮನೆಯಲ್ಲಿ ಯಾರಿಲ್ಲದ ಸಂದರ್ಭದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕಂಡಿದ್ದಾನೆ ಎಂದು ತಿಳಿದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಎಂ.ಎಸ್. ಸೂರ್ಯವಂಶಿ ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿಡು ತನಿಖೆ ಕೈಗೊಂಡಿದ್ದಾರೆ. ಪ್ರಕರಣ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Tags:

error: Content is protected !!