ಹೆರಿಗೆ ವೇಳೆ ವೈದ್ಯರ ನಿರ್ಲಕ್ಷಕ್ಕೆ ಗರ್ಭಿಣಿಎರಡು ಜೀವಗಳು ಬಲಿಯಾಗಿವೆ. ಹೆರಿಗೆ ವೇಳೆ ಮಗು ಸಾವನಪ್ಪಿದರೆ, ತೀವ್ರ ರಕ್ತ ಶ್ರಾವದಿಂದ ಗರ್ಭಿಣಿ ಕೂಡಾ ಸಾವನಪ್ಪಿದ್ದಾಳೆ. ಇದಕ್ಕೆ ಪ್ರಮುಖ ಕಾರಣವೇ ವೈದ್ಯರ ನಿರ್ಲಕ್ಷ ಎಂದು ಕುಟುಂಬಸ್ಥರ ಆರೋಪವಾಗಿದೆ. ಹಾಗಾದರೆ ಈ ಘಟನೆ ನಡೆದಿದ್ದಾದರೂ ಎಲ್ಲಿ ಅಂತೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್…

ಹೌದು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಸರ್ಕಾರಿ ವೈದ್ಯರ ಬೇಜವಾಬ್ದಾರಿತನಕ್ಕೆ ಎರಡು ಜೀವಗಳು ಬಲಿಯಾಗಿವೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸಕಾಲಕ್ಕೆ ಚಿಕಿತ್ಸೆ ಸಿಗದೆ, ಬಾಣಂತಿ ಹಾಗೂ ಹಸುಗೂಸು ಸಾವನ್ನಪ್ಪಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯ ಸಿಂದಗಿ ತಾಲೂಕಿನ ಢವಳಾರ ಗ್ರಾಮದ ನಿವಾಸಿ ಮೈತ್ರಾ ಸುಂಗಠಾಣ (30) ಎಂಬುವವರಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕುಟುಂಬಸ್ಥರು ಅವರನ್ನು ಕಾರಿನ ಮೂಲಕ ಮೊದಲು ಯಂಕಂಚಿ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಅಲ್ಲಿನ ಸಿಬ್ಬಂದಿ ಹೆಚ್ಚಿನ ಚಿಕಿತ್ಸೆಗಾಗಿ ಸಿಂದಗಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು, ಆದರೆ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಸರಿಯಾದ ಚಿಕಿತ್ಸೆ ಸಿಗದೆ ಬಾಣಂತಿ ಮತ್ತು ಮಗು ಸಾವನ್ನಪ್ಪಿದ್ದಾರೆ. ಗರ್ಭಿಣಿ ಮಹಿಳೆಗೆ ತಾಲೂಕು ಆಸ್ಪತ್ರೆಗೆ ಬಂದಾಗ ಅಲ್ಲಿ ಕರ್ತವ್ಯದಲ್ಲಿ ಇರಬೇಕಾದ ವೈದ್ಯರು ಇರಲಿಲ್ಲ, ಅಲ್ಲಿದ್ದ ನರ್ಸಗಳೇ ಹೆರಿಗೆ ಮಾಡಿಸಿಕೊಂಡಿದ್ದಾರೆ. ಆಗ ಬಾಣಂತಿಗೆ ತೀವ್ರ ರಕ್ತಸ್ರಾವವಾಗುತ್ತಿದ್ದರೂ ವೈದ್ಯರಿಲ್ಲದೆ ಕೇವಲ ನರ್ಸ್‌ಗಳೇ ಚಿಕಿತ್ಸೆ ನೀಡಿದ್ದಾರೆ. ಈ ವೇಳೆ ಗಂಡು ಮಗು ಜನಿಸಿದರೂ, ಸೂಕ್ತ ವೈದ್ಯಕೀಯ ನೆರವು ಸಿಗದೆ ಮಗು ಸಾವನ್ನಪ್ಪಿದೆ…
ಇನ್ನೂ ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಕರ್ತವ್ಯದಲ್ಲಿದ್ದಿದ್ದರೆ ಇಂದು ನಮ್ಮ ಮನೆಯ ಮಗಳು ಮತ್ತು ಮಗು ಬದುಕಿರುತ್ತಿದ್ದರು ಎಂದು ಕುಟುಂಬಸ್ಥರ ಆಳಲಾಗಿದೆ. ತೀವ್ರ ರಕ್ತಶ್ರಾವವಾದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಸಿಂದಗಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಮೊದಲು ತೆಗೆದುಕೊಂಡು ಹೋಗಿದ್ದಾರೆ, ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಬಿ ಎಲ್ ಡಿ ಇ ಆಸ್ಪತ್ರೆಗೆ ತಂದಿದ್ದಾರೆ. ಇಷ್ಟರ ಮದ್ಯೆ ಗರ್ಭಿಣಿ ಮಹಿಳೆ ಕೂಡಾ ಸಾವನಪ್ಪಿದ್ದಾಳೆ. ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಕೆಲಸ ಮಾಡುವುದಿಲ್ಲ, ಅವರ ನಿರ್ಲಕ್ಷ್ಯವೇ ಈ ಎರಡು ಸಾವುಗಳಿಗೆ ನೇರ ಕಾರಣ, ಎಂದು ಮೃತರ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ…
ಒಂದೆಡೆ ಸರ್ಕಾರ ತಾಯಿ ಕಾರ್ಡ್, ಸುರಕ್ಷಿತ ಹೆರಿಗೆ ಎಂದು ಕೋಟಿ ಕೋಟಿ ಖರ್ಚು ಮಾಡುತ್ತಿದ್ದರೆ, ಮತ್ತೊಂದೆಡೆ ತಾಲೂಕು ಕೇಂದ್ರದ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದೆ ಬಡವರು ಪ್ರಾಣ ಕಳೆದುಕೊಳ್ಳುತ್ತಿರುವುದು ವ್ಯವಸ್ಥೆಯ ದುರಂತಕ್ಕೆ ಸಾಕ್ಷಿಯಾಗಿದೆ. ಜಿಲ್ಲಾ ಆರೋಗ್ಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ವೈದ್ಯರ ಮೇಲೆ ಕ್ರಮ ಕೈಗೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕು…
