ಧಾರವಾಡ ಸವದತ್ತಿ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ರಸ್ತೆ ಕಾಮಗಾರಿ ನಡೆಸುತ್ತಿದ್ದ ರೋಡ್ ರೋಲರ್ ಅಡಿಯಲ್ಲಿ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಅಮ್ಮಿನಭಾವಿ ಹೊರವಲಯದಲ್ಲಿ ನಡೆದಿದೆ.

ವೈ- ಧಾರವಾಡ ಸವದತ್ತಿ ರಸ್ತೆಯ ಅಮ್ಮಿನಭಾವಿ ಸಮೀಪ ಮುಖ್ಯ ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಈ ವೇಳೆ ರೋಡ್ ರೋಲರ್ ಅನಿರೀಕ್ಷಿತವಾಗಿ ಹರಿದಿದೆ. ರೋಲರ್‌ನ ಬೃಹತ್ ಚಕ್ರ ವ್ಯಕ್ತಿಯ ಮೇಲೆ ಹರಿದ ಪರಿಣಾಮ ತಲೆಯು ಛಿದ್ರವಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನೂ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.
