DEATH

ರಸ್ತೆ ಅಪಘಾತದಲ್ಲಿ ಶಿರುಗುಪ್ಪಿ ಅರಿಹಂತ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಸಾವು.

Share

ತಾಲೂಕಿನ ಶಿರಗುಪ್ಪಿ ಗ್ರಾಮದ ಅರಿಹಂತ ಶಿಕ್ಷಣ ಸಂಸ್ಥೆಯ ಕನ್ನಡ ವಿಭಾಗದ ಶಿಕ್ಷಕಿ ಹಾಗೂ ಜೈನ ಪಾಠಶಾಲೆಯ ಗುರುಮಾತೆಯಾದ ಕುಮಾರಿ ಸುವರ್ಣಾ ಮಲ್ಲಪ್ಪಾ ಮೋನೆ (ವಯಸ್ಸು ೨೪) ಅವರು ರವಿವಾರ ಬೆಳಿಗ್ಗೆ ಬೆಳಗಾವಿಗೆ ತೆರಳುವ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದುರ್ಘಟನಾವಶಾತ್ ಮೃತಪಟ್ಟಿದ್ದಾರೆ.
ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ರಸ್ತೆ ಮಧ್ಯೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿ, ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೃತರು ತಂದೆ-ತಾಯಿ ಹಾಗೂ ಓರ್ವ ಸಹೋದರರನ್ನು ಅಗಲಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಅರಿಹಂತ ಶಿಕ್ಷಣ ಸಂಸ್ಥೆಯಲ್ಲಿ ಆದರ್ಶ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಅವರು ವಿದ್ಯಾರ್ಥಿಗಳ ಪ್ರೀತಿ ಹಾಗೂ ಪೋಷಕರ ಗೌರವವನ್ನು ಗಳಿಸಿದ್ದರು. ಅವರ ಅಕಾಲಿಕ ನಿಧನದಿಂದ ಸಂಸ್ಥೆಯ ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಹಾಗೂ ಗ್ರಾಮಸ್ಥರು ಆಳವಾದ ಶೋಕ ವ್ಯಕ್ತಪಡಿಸಿದ್ದಾರೆ.

Tags:

error: Content is protected !!