ಖಾನಾಪೂರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರು ಕೇರಳದ ಕಣ್ಣೂರಿನಲ್ಲಿ ಐಎನ್ಸಿ ಪುದುಚೇರಿ ಮತ್ತು ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಆಯೋಜಿಸಲಾಗಿರುವ ‘ವಾಕ್ ಫಾರ್ ಮಹೆ’ ಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ.
ರಾಷ್ಟ್ರ ರಾಜಕಾರಣದಲ್ಲಿ ತಮ್ಮ ಸಂಘಟನಾ ಚತುರತೆಯ ಮೂಲಕ ಹೈಕಮಾಂಡ್ ಗಮನ ಸೆಳೆದಿರುವ ಅವರು, ಎಐಸಿಸಿ ವತಿಯಿಂದ ದೇಶದ ವಿವಿಧೆಡೆ ಆಯೋಜಿಸಲಾಗುತ್ತಿರುವ ಅಭಿಯಾನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಕೇರಳ ಹಾಗೂ ಪುದುಚೇರಿ ವ್ಯಾಪ್ತಿಯ ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಅವರು, ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವ ಕಾರ್ಯದಲ್ಲಿ ನಿರತರಾಗಿದ್ದಾರೆ.

