ತಮ್ಮ ಜೀವನವನ್ನೇ ಜನಸೇವೆಗೆ ಮುಡಿಪಾಗಿಟ್ಟಿರುವ ಆಶಾ ಕಾರ್ಯಕರ್ತೆಯರು ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿಗಳು ನೀಡಿದ್ದ ಭರವಸೆಗಳು ಕೇವಲ ಕಾಗದದ ಮೇಲಷ್ಟೇ ಉಳಿದಿವೆ ಎಂದು ಆಕ್ರೋಶ ಹೊರಹಾಕಿದ ಕಾರ್ಯಕರ್ತೆಯರು, ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ.


ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆಯನ್ನು ನಡೆಸಿದರು. ಈ ಕುರಿತಾದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.
ಕಳೆದ ಬಾರಿ ಕೈಗೊಂಡ ಪ್ರತಿಭಟನೆ ಹಿನ್ನೆಲೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 10 ಸಾವಿರ ಗೌರವ ಧನ ನೀಡುವ ಭರವಸೆ ನೀಡಿದರು. ಆದರೇ, ಸುಮಾರು 20 ಸಭೆಗಳು ನಡೆಸಿದರೂ ಆದರೇ, ಯಾವುದೇ ವಿಶ್ವಾಸಾರ್ಹ ಭರವಸೆ ನೀಡುತ್ತಿಲ್ಲ. ಇದರಿಂದಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟು ಸೇವೆ ಸಲ್ಲಿಸಿದರೂ ಯಾವುದೇ ಸ್ಪಂದನೆ ತೋರುತ್ತಿಲ್ಲ. ಮಾರ್ಚ್ 6 ರಂದು ನಮ್ಮ ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೇ, ಪಾದಯಾತ್ರೆ ಮೂಲಕ ಬೆಂಗಳೂರಿಗೆ ಹೋಗಿ ಪ್ರತಿಭಟಿಸುವುದಾಗಿ ಆಶಾ ಕಾರ್ಯಕರ್ತೆಯ ಸಂಘದ ಬೆಳಗಾವಿ ಜಿಲ್ಲಾ ಉಪಾಧ್ಯಕ್ಷೆ ರೂಪಾ ಅಂಗಡಿ ಎಚ್ಚರಿಕೆಯನ್ನು ನೀಡಿದರು.
2024-25 ರಲ್ಲಿ ಅಹೋರಾತ್ರಿ ಹೋರಾಟವನ್ನ ಫ್ರೀಡಂ ಪಾರ್ಕಿನಲ್ಲಿ ನಡೆಸಿದಾಗ ಸಿಎಂ ನಮ್ಮ ಭರವಸೆ ನೀಡದ ಹಿನ್ನೆಲೆ ಹೋರಾಟ ಕೈಬಿಡಲಾಗಿತ್ತು. ಆದರೇ ನಮ್ಮ ಬೇಡಿಕೆಗಳು ಈಡೇರಿಲ್ಲ. ಶೀಘ್ರದಲ್ಲೇ ಗೌರವ ಧನವನ್ನು ಹೆಚ್ಚಿಸಬೇಕು. 7 ಸಾವಿರ ಆಶಾ ಕಾರ್ಯಕರ್ತೆಯನ್ನು ತೆಗೆಯುವ ನಿರ್ಧಾರವನ್ನು ಕೈಬಿಡಬೇಕು. ಪ್ರಣಾಳಿಕೆಯಲ್ಲಿ ಹೇಳಿದಂತೆ 8 ಸಾವಿರ ಹೆಚ್ಚಳ ಮಾಡಬೇಕು. ಒಂದು ವೇಳೆ ನಮ್ಮ ಬೇಡಿಕೆಗಳು ಈಡೇರದಿದ್ದರೇ ಉಗ್ರ ಪ್ರತಿಭಟನೆ ನಡೆಸುವುದಾಗಿ ಸುಜಾತಾ ಕಾಡಮಠ ಹೇಳಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ವಿವಿಧೆಡೆ ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ಧರು.
