• ಬಡಾಲ ಅಂಕಲಗಿ ಅಕ್ರಮ ಮರ ಕಡಿತ ಪ್ರಕರಣ
• ತಪ್ಪಿತಸ್ಥರ ವಿರುದ್ಧ ಡಿಸಿ ಮೊಹಮ್ಮದ್ ರೋಷನ್ ಕೆಂಗಣ್ಣು
• ಸರ್ಕಾರಿ ಮರ ಕಡಿದರೆ ಜೈಲು ಗತಿ: ಡಿಸಿ ಎಚ್ಚರಿಕೆ
• ಅಕ್ರಮ ಎಸಗಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ

ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮರಗಳನ್ನು ಕಡಿದ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಪರಿಸರ ನಾಶ ಮಾಡಿದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಬಡಾಲ ಅಂಕಲಗಿ ಗ್ರಾಮದ ಸರ್ಕಾರಿ ಭೂಮಿಯಲ್ಲಿ ನಿಯಮಬಾಹಿರವಾಗಿ ಮರಗಳನ್ನು ಕಡಿದಿರುವುದು ಗಮನಕ್ಕೆ ಬಂದಿದೆ. ಸರ್ಕಾರಿ ಜಮೀನಿನಲ್ಲಿರುವ ಮರಗಳನ್ನು ಕಡಿಯಬೇಕಾದರೆ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಆದರೆ, ಈ ಪ್ರಕರಣದಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಮರ ಕಡಿದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು
