Belagavi

ಧಗಧಗನೇ ಹೊತ್ತಿ ಉರಿದ ಚಲಿಸುತ್ತಿದ್ದ ದಟ್ಸನ್ ಕಾರು!!!

Share

• ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಕಾರು ಭಸ್ಮ
• ಕಣಬರ್ಗಿ ನಿವಾಸಿ ಸೋಮಲಿಂಗ್‌ಗೆ ಸೇರಿದ ವಾಹನ
• ಅಷ್ಠೇ ಚಂದಗಢ ಗಡಿಭಾಗದಲ್ಲಿ ಸಂಭವಿಸಿದ ದುರ್ಘಟನೆ
• ಮಾರಿಹಾಳ ಪೊಲೀಸರಿಂದ ಸ್ಥಳ ಪರಿಶೀಲನೆ

ಬೆಳಗಾವಿಯ ಕಣಬರ್ಗಿ ನಿವಾಸಿ ಸೋಮಲಿಂಗ್ ಕುಂಬಾರ್ ಅವರಿಗೆ ಸೇರಿದ ಕಾರೊಂದು ಇಂದು ಸಂಜೆ ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿದೆ. ಚಂದಗಡ ಗಡಿಭಾಗದ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಬೆಳಗಾವಿ ನಗರದ ಕಣಬರ್ಗಿ ನಿವಾಸಿ ಸೋಮಲಿಂಗ್ ಕುಂಬಾರ್ ಅವರಿಗೆ ಸೇರಿದ ದಟ್ಸನ್ ಕಾರು ಇಂದು ಸಂಜೆ ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆಕಸ್ಮಿಕ ಬೆಂಕಿಗೆ ತುತ್ತಾಗಿದೆ. ಅಷ್ಠೇ ಚಂದಗಢ ಬಾರ್ಡರ್ ರಸ್ತೆಯಲ್ಲಿ ಕಾರು ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಮಾತ್ರದಲ್ಲಿ ಇಡೀ ಕಾರನ್ನು ಆವರಿಸಿಕೊಂಡಿದೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಕಾರಿನಲ್ಲಿದ್ದವರು ತಕ್ಷಣ ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.
ರಸ್ತೆಯ ಮಧ್ಯೆಯೇ ಕಾರು ಧಗಧಗನೇ ಹೊತ್ತಿ ಉರಿಯುತ್ತಿದ್ದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾರಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ಬೆಂಕಿ ಕಾಣಿಸಿಕೊಳ್ಳಲು ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಯಲ್ಲಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Tags:

error: Content is protected !!