Vijaypura

ಬಿಜೆಪಿ ಪಕ್ಷ ಭ್ರಷ್ಟಾಚಾರದ ಪಕ್ಷ; ಬಿಜೆಪಿಯಲ್ಲಿ ಅತ್ಯಾಚಾರಿಗಳೇ ಹಚ್ಚಿದ್ದಾರೆ; ಕಾಂಗ್ರೆಸ್ ಮುಖಂಡರ ವಾಗ್ದಾಳಿ

Share

ದೇಶದಲ್ಲಿ ಭ್ರಷ್ಟಾಚಾರದ ಪಕ್ಷ ಯಾವುದು ಎಂಬುದು ಜನರಿಗೆ ತಿಳಿದಿದೆ. ಬಿಜೆಪಿಗೆ ಹತ್ತು ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂಬುದನ್ನು ಅವರು ಇದುವರೆಗೂ ಬಹಿರಂಗಪಡಿಸಿಲ್ಲ. ಜಿಲ್ಲೆ, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಐಷಾರಾಮಿ ಕಚೇರಿಗಳನ್ನು ನಿರ್ಮಿಸಿದೆ. ಕಾಂಗ್ರೆಸ್ ಬಗ್ಗೆ ಮಾತನಾಡುವ ಮೊದಲು ತಮ್ಮ ಪಕ್ಷದ ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಉತ್ತರಿಸಬೇಕು ಎಂದು ವಿಜಯಪುರದಲ್ಲಿ ಕೆಪಿಸಿಸಿ ವಕ್ತಾರ ಎಸ್‌.ಎನ್. ಪಾಟೀಲ್ ಗಣಿಯರ್ ಅವರು ಬಿಜೆಪಿ ಭ್ರಷ್ಟಾಚಾರದ ಕುರಿತು ಪ್ರಶ್ನಿಸಿದರು. ಅಲ್ಲದೇ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ತಮ್ಮ ಪಕ್ಷದಲ್ಲಿ ಶಾಸಕರು ಬಹಿರಂಗವಾಗಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂತಹ ಭ್ರಷ್ಟಾಚಾರದ ಪಕ್ಷದವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದರು. ಇನ್ನೂ ಕಾಂಗ್ರೆಸ್‌ ಮುಖಂಡ ರವಿ ಬಿರಾದಾ‌ರ್ ಅವರು ಬಿಜೆಪಿ ವಿರುದ್ಧ ಹರಿಹಾಯ್ದರು. ಇನ್ನೊಬ್ಬ ಕಾಂಗ್ರೆಸ್ ವಕ್ತಾರ ಡಾ.ರವಿ ಬಿರಾದಾರ ಮಾತನಾಡಿ ಬಿಜೆಪಿ ಪಕ್ಷದಲ್ಲಿ ಹಲವು ನಾಯಕರು ಅತ್ಯಾಚಾರ ಪ್ರಕರಣಗಳಿಂದ ಜಾಮೀನು ಪಡೆದು ಹೊರಬಂದಿದ್ದಾರೆ. ಅಂತವರು ಕಾಂಗ್ರೆಸ್‌ ಪಕ್ಷದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ಅವರು ಹೇಳಿದರು. ರಮೇಶ್ ಜಾರಕಿಹೊಳಿ ಹಾಗೂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಮೇಲೆ ಅತ್ಯಾಚಾರ ಪ್ರಕರಣಗಳಿದ್ದರೂ, ಜಾಮೀನಿನ ಮೇಲೆ ಹೊರಬಂದು ಕಾಂಗ್ರೆಸ್ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ರವಿ ಬಿರಾದಾರ್ ಆರೋಪಿಸಿದರು.

Tags:

error: Content is protected !!