ಗವರ್ನರ್ ಕಡೆಯಿಂದ ಹೆಚ್ಚಿನ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಬಿಜೆಪಿೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಸರ್ಕಾರ ನಡೆಸಲು ಪ್ರಯತ್ನ ನಡೆಯುತ್ತಿದೆ” ಎಂದು ವೈದ್ಯಕೀಯ ಸಚಿವ ಶರಣ ಪ್ರಕಾಶ ಪಾಟೀಲ ಆರೋಪಿಸಿದರು.
ರಾಜ್ಯಪಾಲರು ದ್ವೇಷ ಭಾಷಣ ಮಸೂದೆ ತಿರಸ್ಕರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ವಿಜಯಪುರದಲ್ಲಿ ಸಚಿವ ಶರಣಪ್ರಕಾಶ ಪಾಟೀಲ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯಪಾಲರ ನಡೆ ಬಗ್ಗೆ ಮಾತನಾಡಿದ ಅವರು,
ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯಪಾಲರ ಮೂಲಕ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿ ತೊಂದರೆ ನೀಡುತ್ತಿದೆ ಎಂದು ಹೇಳಿದರು. ಇದರಲ್ಲಿ ಹೊಸದೇನೂ ಇಲ್ಲ. ಬಿಜೆಪಿಯಿಂದ ಬೇರೆ ನಿರೀಕ್ಷೆಯೂ ಇಲ್ಲ” ಎಂದು ಕಟುವಾಗಿ ಟೀಕಿಸಿದರು.
ದ್ವೇಷ ಭಾಷಣ ಮಸೂದೆ ಸಾರ್ವಜನಿಕ ಹಿತಾಸಕ್ತಿಯಿಂದ ತರಲಾಗಿತ್ತು. ಅದನ್ನು ನೆನೆಗುದಿಗೆ ಹಾಕುವ ಹುನ್ನಾರ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.
“ಸಂವಿಧಾನದ ಚೌಕಟ್ಟಿನೊಳಗೆ ಮುಂದೇನು ಮಾಡಬೇಕೋ ನೋಡುತ್ತೇವೆ. ಸಂವಿಧಾನದಲ್ಲಿ ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ಸಚಿವ ಶರಣಪ್ರಕಾಶ ಪಾಟೀಲ್ ಹೇಳಿದರು.
