Vijaypura

ಸಿಮೆಂಟ್ ಲಾರಿ – ಎರಡು ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

Share

ವಿಜಯಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬಬಲೇಶ್ವರ ಪಟ್ಟಣದ ಹೊರಭಾಗದ ವಿಜಯಪುರ–ಜಮಖಂಡಿ ರಸ್ತೆಯಲ್ಲಿ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಎರಡು ಬೈಕ್‌ಗಳು ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಅಪಘಾತದ ತೀವ್ರತೆಗೆ ಒಂದು ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ವಿಜಯಪುರ ನಗರದ ಕಾಶೀನಾಥ ಬಿದರಿ (43) ಹಾಗೂ ಸತೀಶ ಶಿಂದೆ (38) ಎಂದು ಗುರುತಿಸಲಾಗಿದೆ. ಮತ್ತೊಂದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಡಿಕ್ಕಿ ನಂತರ ಲಾರಿ ಪಲ್ಟಿಯಾಗಿದ್ದು, KA 28 D0871 ನೋಂದಣಿ ಸಂಖ್ಯೆಯ ಲಾರಿಯಾಗಿದೆ. KA 28 HQ 1947 ಬೈಕ್‌ನಲ್ಲಿದ್ದವರೇ ಮೃತರು ಎಂದು ತಿಳಿದುಬಂದಿದೆ. KA 32 HN 0787 ಬೈಕ್‌ನಲ್ಲಿದ್ದ ಇಬ್ಬರು ಗಾಯಾಳುಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

Tags:

error: Content is protected !!