State

ವರಿಷ್ಠರ ಭೇಟಿ ಬೆನ್ನಲ್ಲೇ ಡಿಕೆಶಿ ಆಕ್ರೋಶ:

Share

ನವದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಧ್ಯಮಗಳ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ರಾಜಕೀಯ ಚರ್ಚೆಗಳ ಬಗ್ಗೆ ಪ್ರಶ್ನಿಸಿದ ವರದಿಗಾರರಿಗೆ ತಮ್ಮದೇ ಶೈಲಿಯಲ್ಲಿ ಖಡಕ್ ಉತ್ತರ ನೀಡಿದ್ದಾರೆ.

ದೆಹಲಿಯಲ್ಲಿ ಎಐಸಿಸಿ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದ ವಿದ್ಯಮಾನಗಳ ಬಗ್ಗೆ ಡಿ.ಕೆ. ಶಿವಕುಮಾರ್ ಚರ್ಚೆ ನಡೆಸಿದರು. ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವರಿಷ್ಠರೊಂದಿಗೆ ಚರ್ಚಿಸಿದ ಎಲ್ಲ ವಿಷಯಗಳನ್ನು ಬೀದಿಯಲ್ಲಿ ನಿಂತು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ನೇರವಾಗಿಯೇ ಹೇಳಿದರು. ಪಕ್ಷದ ಆಂತರಿಕ ವಿಚಾರಗಳು ಮತ್ತು ಆಡಳಿತಾತ್ಮಕ ವಿಷಯಗಳ ಬಗ್ಗೆ ಹೈಕಮಾಂಡ್‌ಗೆ ಮಾಹಿತಿ ನೀಡಲಾಗಿದೆಯೇ ಹೊರತು, ಅದನ್ನು ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಮಾಧ್ಯಮಗಳ ಪ್ರಶ್ನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿಸಿಎಂ, “ನಾವು ದೆಹಲಿಗೆ ಬಂದಿರುವುದು ಗಾಳಿ ಕುಡಿಯುವುದಕ್ಕಲ್ಲ, ರಾಜಕಾರಣ ಮಾಡುವುದಕ್ಕೆ” ಎಂದು ಗುಡುಗಿದರು. ವರಿಷ್ಠರನ್ನು ಭೇಟಿಯಾಗಿದ್ದೇವೆ ಎಂದರೆ ಎಲ್ಲವನ್ನೂ ಹೇಳಿರುತ್ತೇವೆ ಎಂದ ಅವರು, ಪ್ರತಿ ನಡೆಯನ್ನೂ ವಿವರಿಸಲು ಸಾಧ್ಯವಿಲ್ಲ ಎಂದು ಖಡಕ್ ಆಗಿ ನುಡಿದರು.
ಈ ಮೂಲಕ ರಾಜ್ಯ ರಾಜಕಾರಣದ ಮುಂದಿನ ನಡೆಯ ಬಗ್ಗೆ ಕುತೂಹಲ ಕಾಯ್ದಿರಿಸಿದ ಶಿವಕುಮಾರ್, ಟೀಕಾಕಾರರಿಗೆ ಮತ್ತು ಕುತೂಹಲಿಗಳಿಗೆ ತೀಕ್ಷ್ಣ ಸಂದೇಶ ರವಾನಿಸಿದ್ದಾರೆ.

Tags:

error: Content is protected !!