Vijaypura

ದಲಿತರ ಮೇಲೆ ದೌರ್ಜನ್ಯ ಖಂಡಿಸಿ ಡಿಎಸ್‌ಎಸ್‌ ಪ್ರತಿಭಟನೆ

Share

ವಿಜಯಪುರ ಜಿಲ್ಲೆಯ ಕೊಲ್ದಾರ ಪಟ್ಟಣದಲ್ಲಿ 12 ದಲಿತ ಕುಟುಂಬಗಳ ಮನೆಗಳನ್ನು ಯಾವುದೇ ನೋಟಿಸ್‌ ನೀಡದೆ ತೆರವುಗೊಳಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ವಿಜಯಪುರ ನಗರದಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಹಲವು ವರ್ಷಗಳಿಂದ ಅಲ್ಲಿ ವಾಸವಿದ್ದ ದಲಿತರ ಗುಡಿಸಲುಗಳನ್ನು ಜೆಸಿಬಿ ಬಳಸಿ ತೆರವುಗೊಳಿಸಲಾಗಿದ್ದು, ಯಾವುದೇ ಮುನ್ಸೂಚನೆ ನೀಡದೆ ಈ ದೌರ್ಜನ್ಯ ಎಸಗಿದ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಸಮಿತಿ ಒತ್ತಾಯಿಸಿದರು. ಇನ್ನೂ ದಲಿತ ಕುಟುಂಬಗಳ ಮೇಲೆ ದೌರ್ಜನ್ಯ ಎಸಗಿದ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಸಂಜು ಕಂಬಾಗಿ ಅವರು ಆಗ್ರಹಿಸಿದರು. ದಲಿತರನ್ನು ರಕ್ಷಸಬೇಕಾದ ಅಧಿಕಾರಿಗಳೇ ಅವರ ಮನೆಗಳನ್ನು ನೆಲಸಮ ಮಾಡಿ, ದಬ್ಬಾಳಿಕೆ ನಡೆಸಿರುವುದು ಸರಿಯಲ್ಲ. ಕೂಡಲೇ ಅವರಿಗೆ ವಸತಿ ಮತ್ತು ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

Tags:

error: Content is protected !!