Dharwad

 ಧಾರವಾಡದಲ್ಲಿ ಇಂದು ಉದ್ಯೋಗ ಆಕಾಂಕ್ಷಿಗಳಿಂದ ಬೃಹತ್ ಪ್ರತಿಭಟನೆ…. ಉದ್ಯೋಗ ಆಕಾಂಕ್ಷಿಗಳ ಪ್ರತಿಭಟನೆಗೆ ವಿಪಕ್ಷ ಉಪನಾಯಕ‌ರ ಸಾಥ್

Share

• ಧಾರವಾಡದಲ್ಲಿ ಇಂದು ಉದ್ಯೋಗ ಆಕಾಂಕ್ಷಿಗಳ ಬೃಹತ್ ಆಕ್ರೋಶ
• ಅರವಿಂದ ಬೆಲ್ಲದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ
• ಖಾಲಿ ಹುದ್ದೆ ಭರ್ತಿಗೆ ಆಗ್ರಹಿಸಿ ನಿರುದ್ಯೋಗಿಗಳ ರಣಕಹಳೆ
• ಹೈ ಅಲರ್ಟ್: ಧಾರವಾಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಸರ್ಕಾರಗಳು ಸರ್ಕಾರಿ ಖಾಲಿ ಹುದ್ದೆಗಳ ಭರ್ತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಧಾರವಾಡದಲ್ಲಿ ವಿದ್ಯಾರ್ಥಿ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದು, ಉದ್ಯೋಗ ಆಕಾಂಕ್ಷಿಗಳ ಈ ಪ್ರತಿಭಟನೆಗೆ ವಿಧಾನ ಸಭೆ ವಿರೋಧ ಪಕ್ಷ ಉಪನಾಯಕ ಅರವಿಂದ ಬೆಲ್ಲದವರು ಸಾಥ್ ನೀಡಿದ್ದಾರೆ.

ಧಾರವಾಡದ ಶ್ರೀ ನಗರ ಮುಖ್ಯ ವೃತದಿಂದ ಪ್ರತಿಭಟನೆ ಆರಂಭಗೊಳ್ಳಲಿದ್ದು, ಸಪ್ತಾಪುರ, ಜುಬ್ಲಿ ವೃತ ಮಾರ್ಗವಾಗಿ ಸಾಗಿ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ನಡೆಯಲಿದೆ. ಈ ಹಿಂದೆ ಹಲವು ಬಾರಿ ಉದ್ಯೋಗ ಆಕಾಂಕ್ಷಿಗಳು ಪ್ರತಿಭಟನೆ ಮಾಡಲು ಮುಂದಾದ ವೇಳೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಅನುಮತಿ ನಿರಾಕರಣೆ ಮಾಡಿತ್ತು. ಈಗ ಮತ್ತೆ ಉದ್ಯೋಗ ಆಕಾಂಕ್ಷಿಗಳು ಪ್ರತಿಭಟನೆಗೆ ಮುಂದಾಗಿದ್ದು, ಈ ಬಾರಿ ವಿದ್ಯಾರ್ಥಿಗಳ ಆಕ್ರೋಶಕ್ಕೆ ಬಿಜೆಪಿ ಶಾಸಕ ಹಾಗೂ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ ವಿದ್ಯಾರ್ಥಿಗಳಿಗೆ ಸಾಥ್ ನೀಡಿದ್ದಾರೆ. ಈಗಾಗಲೇ ಕಳೆದ ದಿನ ಸೋಮುವಾರ ವಿದ್ಯಾರ್ಥಿಗಳ ಭೇಟಿ ಮಾಡಿದ ಅರವಿಂದ ಬೆಲ್ಲದರವರು ವಿದ್ಯಾರ್ಥಿಗಳೊಂದಿ ಹೋರಾಟದ ಕುರಿತು ಪೂರ್ವಭಾವಿ ಸಭೆ ಮಾಡಿದ್ದಾರೆ. ಜತೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರವರು ಕೂಡಾ ಉದ್ಯೋಗ ಆಕಾಂಕ್ಷಿಗಳ ಹೋರಾಟದ ಭಾಗವಾಗಿ ಇಲಾಖೆಯ ಸಿಬ್ಬದಿಯೊಂದಿಗೆ ಸಭೆ ಮಾಡಿದ್ದು, ಉದ್ಯೋಗ ಆಕಾಂಕ್ಷಿಗಳ ಹೋರಾಟ ವೇಳೆ ಪೊಲೀಸರು ಎಲ್ಲರೂ ಎಚ್ಚರಿಕೆ ಹೆಜ್ಜೆ ಇಡಬೇಕು. ಅನಾವಶ್ಯಕವಾಗಿ ವಿದ್ಯಾರ್ಥಿಗಳ ಮೇಲೆ ಕ್ರಮ ಕೈಗೊಳ್ಳಬೇಡಿ, ಧಾರವಾಡ ಜಿಲ್ಲೆಗೆ ವಿವಿಧ ಜಿಲ್ಲೆಗಳಿಂದ ಉದ್ಯೋಗ ಪಡೆಯುವ ಉದ್ದೇಶದಿಂದ ತರಭೇತಿಗೆ ಬಂದಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ಸಿಬ್ಬಂದಿಗಳಿಗೆ ಕಮಿಷನರ್ ತಿಳಿ ಹೇಳಿದರು.

 

Tags:

error: Content is protected !!