ವಿಜಯಪುರ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಜಿ ಸೈನಿಕರು ಪುಲ್ವಾಮದಲ್ಲಿ ಹುತಾತ್ಮರಾದ ಸೈನಿಕರಿಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸೈನಿಕರು, ಭಯೋತ್ಪಾದಕರ ಕುತಂತ್ರಕ್ಕೆ ಭಾರತೀಯ ಸೈನಿಕರು ಹುತಾತ್ಮರಾಗಿದ್ದರು. ಫೆಬ್ರವರಿ 14ರಂದು ದೇಶದ ತುಂಬಾ ಕರಾಳ ದಿನ ಆಚರಣೆ ಮಾಡುತ್ತೇವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿಯ ಮುಖಂಡರು ಹಾಗೂ ಮಾಜಿ ಸೈನಿಕರು ಭಾಗವಹಿಸಿದ್ದರು.

