ಮಾಜಿ ಸಚಿವರು ಹಾಗೂ ಅಥಣಿ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷರಾದ ಶ್ರೀಮಂತ (ತಾತ್ಯಾ) ಪಾಟೀಲ ಅವರ ಹುಟ್ಟು ಹಬ್ಬದ ನಿಮಿತ್ಯವಾಗಿ ಕಾರ್ಖಾನೆಯ ಆವರಣದಲ್ಲಿ ಶ್ರೀಮಂತ ಪಾಟೀಲ ಪೌಂಡೇಶನ್ ವತಿಯಿಂದ ಆಯೋಜಿಸಿದ್ದ ಉಚಿತ ಮಹಾಆರೋಗ್ಯ ತಪಾಸನೆ ಶಿಬಿರದಲ್ಲಿ ಎರಡು ಸಾವಿರ ಜನ ಕಣ್ಣಿನ ತಪಾಸಣೆ ಮಾಡಿಕೊಂಡರು ಅದರಲ್ಲಿ ಐದು ನೂರು ಜನರ ಕಣ್ಣಿನ ಯಶಸ್ವಿ ಶಾಸ್ತ್ರಕ್ಕೆ ನೆರವೇರಿಸಿ ಬಡ ಕುಟುಂಬಗಳಿಗೆ ಸಹಾಯ ಹಸ್ತ ನೀಡಿದ್ದಾರೆ.
ಶಿಬಿರದಲ್ಲಿ ಹೃದಯ ಕಾಯಿಲೆಗಳು, ಮಧುಮೇಹ, ತ್ವಚಾರೋಗ, ಮುಂತಾದ ಕಾಯಿಲೆಗಳ ಮೇಲೆ ಆರೋಗ್ಯ ತಪಾಸಿನ ನೆರವೇರಿಸಿ ಅವಶಕ್ತಿ ಇರುವ ರೋಗಿಗಳಿಗೆ ಶಸ್ತ್ರಚಿಕಿತ್ಸೆ, ನೀಡಿದ್ದಾರೆ.

ಕಣ್ಣಿನ ಶಸ್ತ್ರಚಿಕಿತ್ಸೆ ಶಿಬಿರದಲ್ಲಿ ೨ ಸಾವಿರ ಜನರು ಭಾಗವಹಿಸಿ, ಲಾಭವನ್ನು ಪಡೆದರು. ಜೊತೆಗೆ ಶಿಬಿರದಲ್ಲಿ ಹಮ್ಮಿಕೊಂಡಿದ್ದ ರಕ್ತದಾನದಲ್ಲಿ ಸಾವಿರಾರು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನವನ್ನು ಮಾಡಿ ಮಾದರಿಯಾದರು.
ಶಿಬಿರದಲ್ಲಿ ಸುಮಾರು ೫೦೦ ಕ್ಕೂ ಹೆಚ್ಚು ಜನರು ಮೋತಿಬಿಂದು ಹಾಗೂ ವಿವಿಧ ಕಣ್ಣಿನ ಶಸ್ತ್ರಚಿಕಿತ್ಸೆಗಳಿಗಾಗಿ ನೋಂದಣಿ ಮಾಡಿಕೊಂಡಿದ್ದರು. ಕಳೆದ ಫೆಬ್ರವರಿ ೧ರಿಂದ ಒಂದು ವಾರದವರೆಗೆ ಎಲ್ಲರನ್ನು ಹಂತ ಹಂತವಾಗಿ ಸಾಂಗಲಿಯ ನಂದಾದೀಪ ಕಣ್ಣಿನ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದ್ದು, ಅಲ್ಲಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದ್ದೆ. ಪ್ರತಿದಿನ ಸರಾಸರಿ ೫೦ ಜನರನ್ನು ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕಲ್ಪಿಸಲಾಗುತ್ತಿದೆ.
ಶಸ್ತ್ರಚಿಕಿತ್ಸೆ ಪಡೆದು ಹಿಂದಿರುಗಿದ ಫಲಾನುಭವಿಗಳು ತಮ್ಮ ಸಂತೋಷವನ್ನು ವ್ಯಕ್ತಪಡಿಸಿ, ಶ್ರೀಮಂತ ತಾತ್ಯಾ ಪಾಟೀಲ ಅವರ ಸಮಾಜಮುಖಿ ಕಾರ್ಯಕ್ಕೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ. ಕಳೆದ ಒಂದು ವಾರದಿಂದ ಶಸ್ತ್ರಚಿಕಿತ್ಸೆಗೆ ತೆರಳುವ ರೋಗಿಗಳಿಗೆ ಶ್ರೀಮಂತ ಪಾಟೀಲ ಫೌಂಡೇಶನ್ ವತಿಯಿಂದ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ಹಾಗೂ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಫೌಂಡೇಶನ್ ಅಧ್ಯಕ್ಷರಾದ ಶ್ರೀನಿವಾಸ್ ಶ್ರೀಮಂತ ಪಾಟೀಲ ಅವರ ನೇತೃತ್ವದಲ್ಲಿ ಸಂಘಟಕರು ಸಮರ್ಪಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ.
