Vijaypura

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

Share

ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯಪುರ ನಗರದ ಹೆಸ್ಕಾಂ ಕಚೇರಿ ಮುಂದೆ ರೈತ ಸಂಘಟನೆಯಿಂದ ಅನಿರ್ದಿಷ್ಟ ಮುಷ್ಕರ ಆರಂಭಿಸಲಾಗಿದೆ. ರೈತರ ಮೇಲೆ ಹೆಸ್ಕಾಂ ಅಧಿಕಾರಿಗಳು ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಮತ್ತು ಜಮೀನುಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಅಧಿಕಾರಿಗಳು ಕೂಡಲೇ ಪ್ರಕರಣಗಳನ್ನು ಹಿಂಪಡೆಯದಿದ್ದರೆ, ಮುಷ್ಕರ ಮುಂದುವರಿಯಲಿದೆ ಎಂದು ರೈತರು ಎಚ್ಚರಿಕೆ ನೀಡಿದರು.

Tags:

error: Content is protected !!