Khanapur

ಖಾನಾಪುರ ಪಂಚಾಯತ್‌ಗಳಿಗೆ ಅಧಿಕಾರಿಗಳ ಸಾರಥ್ಯ: 51 ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕಕ್ಕೆ ಡಿಸಿ ಆದೇಶ

Share

ಖಾನಾಪುರ ತಾಲೂಕಿನ ಪಂಚಾಯತ್ ರಾಜಕಾರಣದಲ್ಲಿ ಈಗ ಅಧಿಕಾರಿಗಳ ಪರ್ವ ಶುರುವಾಗಿದೆ. ತಾಲೂಕಿನ 51 ಗ್ರಾಮ ಪಂಚಾಯಿತಿಗಳ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ, ಆಡಳಿತಾತ್ಮಕ ಕಾರ್ಯಗಳು ಕುಂಠಿತವಾಗದಂತೆ ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿಗಳನ್ನು ನೇಮಿಸಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ 51 ಗ್ರಾಮ ಪಂಚಾಯಿತಿಗಳ ಪಂಚವಾರ್ಷಿಕ ಅವಧಿ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಸುಗಮ ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಮೊಹಮ್ಮದ್ ರೋಷನ್ ಅವರು ಆಡಳಿತಾಧಿಕಾರಿಗಳನ್ನು ನೇಮಿಸಿ ಆದೇಶಿಸಿದ್ದಾರೆ. ಭಾರತೀಯ ಸಂವಿಧಾನದ ಅನುಚ್ಛೇದ 243(ಇ) ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜನವರಿ 27 ರಂದು ಹೊರಡಿಸಲಾದ ಈ ಅಧಿಸೂಚನೆಯನ್ವಯ, 2020-2025ರ ಅವಧಿಯ ಪಂಚಾಯಿತಿಗಳ ಅಧಿಕಾರಾವಧಿ ಮುಗಿದ ತಕ್ಷಣವೇ ನೇಮಕಗೊಂಡ ಅಧಿಕಾರಿಗಳು ಕಾರ್ಯಭಾರ ವಹಿಸಿಕೊಳ್ಳಲಿದ್ದಾರೆ.

ಲೋಕೋಪಯೋಗಿ, ಪಂಚಾಯತ್ ರಾಜ್, ಕೃಷಿ ಮತ್ತು ಪಶುಸಂವರ್ಧನೆಯಂತಹ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳಾಗಿ ಆಯ್ಕೆ ಮಾಡಲಾಗಿದ್ದು, ಇವರು ಹೊಸ ಚುನಾವಣೆ ಮುಗಿದು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಾಗುವವರೆಗೂ ಪಂಚಾಯಿತಿಯ ಸರ್ವ ಅಧಿಕಾರಗಳನ್ನು ಚಲಾಯಿಸಲಿದ್ದಾರೆ. ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಈಗಾಗಲೇ ಪಂಚಾಯಿತಿ ಕಚೇರಿಗಳಲ್ಲಿನ ಹಳೆಯ ಆಡಳಿತ ಮಂಡಳಿಯ ಸದಸ್ಯರ ಹೆಸರು ಫಲಕಗಳನ್ನು ತೆರವುಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ. ಈ ನೇಮಕಾತಿಯು ಹುದ್ದಾನಿರ್ಧಿಷ್ಟವಾಗಿದ್ದು, ಅಧಿಕಾರಿಗಳ ವರ್ಗಾವಣೆಯಾದರೂ ಆಯಾ ಹುದ್ದೆಯಲ್ಲಿರುವವರು ಆಡಳಿತಾಧಿಕಾರಿಗಳಾಗಿ ಮುಂದುವರಿಯಲಿದ್ದಾರೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Tags:

error: Content is protected !!