ಬೆಳಗಾವಿ ನಗರದ ಹೃದಯಭಾಗದಲ್ಲಿರುವ ಲಿಂಗರಾಜ ಕಾಲೇಜು ಆವರಣದಲ್ಲಿ ಕಾಡು ಪ್ರಾಣಿ ಪ್ರತ್ಯಕ್ಷವಾಗಿದೆ ಎಂಬ ಸುದ್ದಿ ಈಗ ನಾಗರಿಕರಲ್ಲಿ ದಿಗಿಲು ಹುಟ್ಟಿಸಿದೆ. ಮಾಹಿತಿ ಸಿಗುತ್ತಿದ್ದಂತೆ ಕಾರ್ಯಪ್ರವೃತ್ತರಾಗಿರುವ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಕುರಿತು ಡಿಎಫ್‌ಓ ಎನ್.ಇ. ಕ್ರಾಂತಿ ಅವರು ನೀಡಿರುವ ಸ್ಪಷ್ಟನೆ ನೀಡಿದ್ದಾರೆ.

ಬೆಳಗಾವಿಯ ಲಿಂಗರಾಜ ಕಾಲೇಜಿನ ಸಮೀಪ ಕಾಡು ಪ್ರಾಣಿ ಕಂಡುಬಂದಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ವ್ಯಾಪಕ ಶೋಧ ಕಾರ್ಯ ನಡೆಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಎಫ್‌ಓ ಎನ್.ಇ. ಕ್ರಾಂತಿ ಅವರು, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಇಲಾಖೆಯು ತೀವ್ರ ನಿಗಾ ವಹಿಸಿದೆ ಎಂದು ತಿಳಿಸಿದರು. ಕಾಲೇಜಿನ ಸುತ್ತಮುತ್ತಲಿನ ಪೊದೆ ಹಾಗೂ ಸಂಶಯಾಸ್ಪದ ಜಾಗಗಳಲ್ಲಿ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ
ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಶೀಲನೆಯ ವೇಳೆ ಚಿರತೆ ಅಥವಾ ಇನ್ಯಾವುದೇ ಕಾಡು ಪ್ರಾಣಿ ಇರುವ ಬಗ್ಗೆ ಈವರೆಗೆ ಯಾವುದೇ ನಿಖರವಾದ ಕುರುಹುಗಳು ಲಭ್ಯವಾಗಿಲ್ಲ ಎಂದು ಅಧಿಕಾರಿಗಳು
ಸ್ಪಷ್ಟಪಡಿಸಿದ್ದಾರೆ. “ಯಾರಿಗೂ ಕಾಡು ಪ್ರಾಣಿಯಿಂದ ಹಾನಿಯಾಗಿಲ್ಲ, ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಆದರೆ ಒಂದು ವೇಳೆ ಕಾಡು ಪ್ರಾಣಿ ಕಂಡುಬಂದಲ್ಲಿ ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕು” ಎಂದು ಡಿಎಫ್‌ಓ ಕ್ರಾಂತಿ ಅವರು ಮನವಿ ಮಾಡಿದ್ದಾರೆ. ಬೈಟ್
